ಆಸ್ಟ್ರೇಲಿಯಾದಲ್ಲಿ ನಡೆಯುವ 67ನೇ ಕಾಮನ್ವೆಲ್ತ್ ಸಂಸದೀಯ ಸಮ್ಮೇಳನದಲ್ಲಿ ಸ್ಪೀಕರ್ ಯು.ಟಿ ಖಾದರ್ ಭಾಗಿ
ಬೆಂಗಳೂರು, ಅ.21: ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರು ಕಾಮನ್ವೆಲ್ತ್ ಸಂಸದೀಯ ಸಂಘ ಕರ್ನಾಟಕ ಶಾಖೆ ಇದರ ಪ್ರತಿನಿಧಿಯಾಗಿ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ 2024ನೇ ನವೆಂಬರ್ 5ರಿಂದ 8ರವರೆಗೆ ನಡೆಯಲಿರುವ 67ನೆ ಕಾಮನ್ವೆಲ್ತ್ ಸಂಸದೀಯ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ‘ವಿಧಾನಸಭೆ ಸಂಸದೀಯ ಕಾರ್ಯ ವಿಧಾನ ಮತ್ತು ಪ್ರಕ್ರಿಯೆಗಳಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆ ಅವಕಾಶಗಳು ಮತ್ತು ಸವಾಲುಗಳು ಹಾಗೂ ಸಂಸದೀಯ ವ್ಯವಸ್ಥೆಯನ್ನು ಬಲಪಡಿಸಲು ಉತ್ತಮ ಕಾರ್ಯವಿಧಾನಗಳನ್ನು ಅಳವಡಿಸಿಕೊಳ್ಳುವ ಪ್ರಮುಖ ಮಾನದಂಡಗಳು, ಮಾನಕಗಳು ಮಾರ್ಗದರ್ಶಿ ಸೂತ್ರಗಳು’ ಎಂಬ ವಿಷಯಗಳಲ್ಲಿ ತಮ್ಮ ನಿಲುವನ್ನು ಮಂಡಿಸಲಿರುವರು ಎಂದು ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story