ಎಸೆಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ : ಖಾಸಗಿ ಶಿಕ್ಷಣ ಸಂಸ್ಥೆಗಳ ಆರೋಪ

ಬೆಂಗಳೂರು : ರಾಜ್ಯಾದ್ಯಂತ ಫೆ.25ರಿಂದ ಮಾ.4ರವರೆಗೆ ಎಸೆಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆ ನಡೆಯುತ್ತಿದ್ದು, ಪ್ರಶ್ನೆಪತ್ರಿಕೆಗಳು ಯೂಟ್ಯೂಬ್ ಸೇರಿದಂತೆ ಜಾಲತಾಣಗಳಲ್ಲಿ ಸೋರಿಕೆಯಾಗಿದೆ ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳು ಆರೋಪಿಸಿವೆ.
ಪರೀಕ್ಷೆ ನಡೆಯುವ ಒಂದು ದಿನದ ಮುಂಚಿತವಾಗಿ ಪ್ರಶ್ನೆಪತ್ರಿಕೆಗಳು ಜಾಲತಾಣಗಳಲ್ಲಿ ಸೋರಿಕೆಯಾಗಿದ್ದು, ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಪಡೆದುಕೊಂಡಿದ್ದಾರೆ. ಪ್ರಶ್ನೆಪತ್ರಿಕೆಗಳು ಸೋರಿಕೆಯಾಗುವಂತೆ ಮಾಡಿದವರ ವಿರುದ್ಧ ಕಾನೂನುಕ್ರಮ ತೆಗೆದುಕೊಳ್ಳಬೇಕು ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳು ಒತ್ತಾಯಿಸಿವೆ.
Next Story