ಎಸೆಸೆಲ್ಸಿ | ವಿಜ್ಞಾನ ಪರೀಕ್ಷೆಗೆ 20 ಸಾವಿರ ಮಂದಿ ಗೈರು
ಬೆಂಗಳೂರು : ರಾಜ್ಯಾದ್ಯಂತ ಎಸೆಸೆಲ್ಸಿ ಪರೀಕ್ಷೆಗಳು ನಡೆಯುತ್ತಿದ್ದು, ಬುಧವಾರ ನಡೆದ ವಿಜ್ಞಾನ ಪರೀಕ್ಷೆಯಲ್ಲಿ 20,513 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಶೇ.97ರಷ್ಟು ವಿದ್ಯಾರ್ಥಿಗಳು ವಿಜ್ಞಾನ ಪರೀಕ್ಷೆಯನ್ನು ಬರೆದಿದ್ದಾರೆ.
ಪರೀಕ್ಷೆಗೆ 8,48,696 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. 8,28,183 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದಾರೆ. ಪರೀಕ್ಷೆಯಲ್ಲಿ ಯಾವುದೇ ಗೊಂದಲಗಳು ಉಂಟಾಗಿಲ್ಲ. ಪರೀಕ್ಷೆಯಲ್ಲಿ ಯಾವುದೇ ಗೊಂದಲಗಳು ಉಂಟಾಗಿಲ್ಲ. ಉತ್ತರಪತ್ರಿಕೆಗಳ ನಕಲು ಪ್ರಕರಣಗಳು ನಡೆದಿರುವ ಬಗ್ಗೆ ವರದಿಯಾಗಿಲ್ಲ.
Next Story