ಎಸೆಸೆಲ್ಸಿ ಪೂರ್ವಸಿದ್ಧತಾ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಸಾಂದರ್ಭಿಕ ಚಿತ್ರ
ಬೆಂಗಳೂರು : ರಾಜ್ಯಮಟ್ಟದ ಎಸೆಸೆಲ್ಸಿ ಪೂರ್ವಸಿದ್ಧತಾ ಪರೀಕ್ಷಾ ವೇಳಾಪಟ್ಟಿ ಶುಕ್ರವಾರದಂದು ಪ್ರಕಟವಾಗಿದ್ದು, ಫೆ.25ರಿಂದ ಮಾ.4ರವರೆಗೆ ಪರೀಕ್ಷೆಗಳು ನಡೆಯಲಿವೆ. ಫೆ.25ರಂದು ಪ್ರಥಮ ಭಾಷೆಯಾದ ಕನ್ನಡ, ತೆಲುಗು, ಸಂಸ್ಕೃತ, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ ಪರೀಕ್ಷೆ ನಡೆಯಲಿವೆ.
ಫೆ.27ರಂದು ಗಣಿತ, ಫೆ.28ರಂದು ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ ಪರೀಕ್ಷೆಗಳು, ಮಾ.1ರಂದು ತೃತೀಯ ಭಾಷೆಯಾದ ಹಿಂದಿ, ಇಂಗ್ಲಿಷ್, ಕನ್ನಡ, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಪರೀಕ್ಷೆಗಳು ನಡೆಯಲಿವೆ. ಮಾ.3ರಂದು ವಿಜ್ಞಾನ ಮತ್ತು ಮಾ.4ರಂದು ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ.
Next Story