ಫೆ.10ರೊಳಗೆ ಬಜೆಟ್‍ಗೆ ಸಲಹೆ, ಸೂಚನೆ ಸಲ್ಲಿಸಿ: ಬಿಬಿಎಂಪಿ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2024-25ನೆ ಸಾಲಿನ ಕರಡು ಆಯವ್ಯಯದ ತಯಾರಿಕೆಯ ಸಿದ್ಧತೆ ಕಾರ್ಯ ಪ್ರಗತಿಯಲ್ಲಿದ್ದು, ಫೆ.10ರೊಳಗೆ ಸಲಹೆ, ಸೂಚನೆಗಳನ್ನು ಪಾಲಿಕೆಗೆ ಸಲ್ಲಿಸಬಹುದಾಗಿದೆ.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿರ್ದೇಶನದಂತೆ ನಗರದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು, ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ತಮ್ಮ ಸಲಹೆ, ಸೂಚನೆಗಳನ್ನು ಪಾಲಿಕೆಗೆ ಸಲ್ಲಿಸಲು ಅನುಕೂಲವಾಗುವಂತೆ ಬಿಬಿಎಂಪಿ ಕೇಂದ್ರ ಕಛೇರಿಯ ಮುಖ್ಯ ದ್ವಾರದ ಬಳಿ ಸಲಹಾ ಪೆಟ್ಟಿಗೆ(ಬಾಕ್ಸ್) ಅನ್ನು ಇರಿಸಿದ್ದು, ಸದರಿ ಸಲಹಾ ಪೆಟ್ಟಿಗೆಯ ಮೂಲಕ ಸಲಹೆಗಳನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ.
2024-25ನೆ ಸಾಲಿನ ಕರಡು ಆಯವ್ಯಯಕ್ಕೆ ನಗರದ ಎಲ್ಲ ಸಾರ್ವಜನಿಕರು, ಸಂಘ-ಸಂಸ್ಥೆಗಳು ತಮ್ಮ ಅಮೂಲ್ಯವಾದ ಸಲಹೆ, ಸೂಚನೆಗಳನ್ನು ಇ-ಮೇಲ್‍ಗಳಾದ bbmpbudget@gmail.com ಹಾಗೂ suggestions2bbmpbudget@gmail.com ಮೂಲಕವೂ ಸಲಹೆ, ಸೂಚನೆಗಳನ್ನು ಸಲ್ಲಿಸಬಹುದಾಗಿದೆ ಎಂದು ಬಿಬಿಎಂಪಿ ಪ್ರಕಟನೆಯಲ್ಲಿ ತಿಳಿಸಿದೆ.
Next Story