ರೇಣುಕಸ್ವಾಮಿ ಕೊಲೆ ಪ್ರಕರಣ | ಎಸ್.ಪಿ.ಪಿ. ಬದಲಾವಣೆಗೆ ಯಾರ ಒತ್ತಡವೂ ಇಲ್ಲ; ಒತ್ತಡ ಹಾಕಿದರೆ ಕೇಳುವುದೂ ಇಲ್ಲ: ಸಿದ್ದರಾಮಯ್ಯ
ಬೆಂಗಳೂರು, ಜೂ.19: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಎಸ್.ಪಿ ಪಿ. (ವಿಶೇಷ ಸರಕಾರಿ ಅಭಿಯೋಜಕ)ಯನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರ, ಶಾಸಕರ ಒತ್ತಡವಿಲ್ಲ. ನನ್ನ ಮೇಲೆ ಒತ್ತಡ ಹಾಕಿದರೆ ಕೇಳುವುದೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಅಭಿಯೋಜಕ ಪ್ರಸನ್ನಕುಮಾರ್ ರನ್ನು ಬದಲಾಯಿಸಲು ಒತ್ತಡ ಹಾಕಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಮುಖ್ಯಮಂತ್ರಿ ಈ ರೀತಿ ಪ್ರತಿಕ್ರಿಯಿಸಿದರು.
ಎಸ್.ಪಿ ಪಿ. ವಿಚಾರವಾಗಿ ಮಾಧ್ಯಮಗಳಲ್ಲಿ ಈ ಬಗ್ಗೆ ಬಿತ್ತರವಾಗುತ್ತಿರುವುದು ಸುಳ್ಳು ಹಾಗೂ ಸತ್ಯಕ್ಕೆ ದೂರವಾದುದು. ಕಾನೂನು ಏನು ಹೇಳುತ್ತದೆಯೋ ಅದನ್ನೇ ಮಾಡುತ್ತೇವೆ ಎಂದರು.
ಪೊಲೀಸ್ ನವರಿಗೆ ಪ್ರಕರಣದಲ್ಲಿ ಎಲ್ಲಾ ಸ್ವಾತಂತ್ರ್ಯವನ್ನೂ ನೀಡಿದ್ದು, ಕಾನೂನಿನ ಪ್ರಕಾರ ತನಿಖೆ ಮಾಡಲು ಸೂಚಿಸಲಾಗಿದೆ ಎಂದರು.
ಎಸ್. ಪಿ. ಪಿ. ಬದಲಾವಣೆಯ ಪ್ರಸ್ತಾವ ನನ್ನ ಮುಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟಪಡಿಸಿದರು.
Next Story