ಕೆಎಸ್ಸಾರ್ಟಿಸಿ ಬಸ್ಗಳಲ್ಲಿ ಟಿಕೆಟ್ ರಹಿತ ಪ್ರಯಾಣ : 6.86 ಲಕ್ಷ ರೂ.ದಂಡ ವಸೂಲಿ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ) ಬಸ್ಗಳಲ್ಲಿ ಟಿಕೆಟ್ ರಹಿತ ಪ್ರಯಾಣ ಮಾಡುತ್ತಿದ್ದ 3,836 ಪ್ರಯಾಣಿಕರಿಂದ ಒಟ್ಟು 6.86 ಲಕ್ಷ ರೂಪಾಯಿ ದಂಡ ವಸೂಲಿ ಮಾಡಲಾಗಿದೆ ಎಂದು ಸಂಸ್ಥೆ ತಿಳಿಸಿದೆ.
ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 41,446 ಬಸ್‍ಗಳನ್ನು ತಪಾಸಣೆ ನಡೆಸಿದ್ದು, 3,621 ಪ್ರಕರಣಗಳಲ್ಲಿ ಒಟ್ಟು 3,836 ಮಂದಿ ಪ್ರಯಾಣಿಕರಿಂದ ಒಟ್ಟು 6,86,766 ರೂ.ದಂಡವನ್ನು ವಸೂಲಿ ಮಾಡಲಾಗಿದೆ. ಅಲ್ಲದೆ, ನಿಗಮದ ಆದಾಯದಲ್ಲಿ ಸೋರಿಕೆಯಾಗುತ್ತಿದ್ದ 94,284 ರೂ.ಗಳನ್ನು ತನಿಖಾಧಿಕಾರಿಗಳು ಪತ್ತೆ ಮಾಡಿದ್ದಾರೆ.
ಅಲ್ಲದೆ, ಸಂಬಂಧಪಟ್ಟ ತಪ್ಪಿತಸ್ಥರ ವಿರುದ್ದ ಇಲಾಖಾ ತನಿಖೆ ಕೈಗೊಳ್ಳಲಾಗಿದೆ. ಸಾರ್ವಜನಿಕ ಪ್ರಯಾಣಿಕರು ಸಂಸ್ಥೆಯ ವಾಹನಗಳನ್ನು ಸಂಚರಿಸುವ ವೇಳೆ ತಪ್ಪದೆ ಟಿಕೆಟ್ ಅಥವಾ ಪಾಸ್ ಪಡೆದು ಪ್ರಯಾಣಿಸಬೇಕು ಎಂದು ಕೆಎಸ್ಸಾರ್ಟಿಸಿ ಸಾರ್ವಜನಿಕ ಪ್ರಯಾಣಿಕರಲ್ಲಿ ಮನವಿ ಮಾಡಿದೆ.
Next Story