ಫ್ರೆಬ್ರವರಿ ತಿಂಗಳಿನಲ್ಲಿ ಟಿಕೆಟ್ ರಹಿತ ಪ್ರಯಾಣ ; ಬಿಎಂಟಿಸಿಯಿಂದ 7.35ಲಕ್ಷ ರೂ. ದಂಡ ವಸೂಲಿ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಬಸ್‍ಗಳಲ್ಲಿ ಟಿಕೆಟ್ ರಹಿತ ಪ್ರಯಾಣ ಮಾಡುತ್ತಿದ್ದ ಸಾರ್ವಜನಿಕರಿಂದ 7.35ಲಕ್ಷ ರೂ.ದಂಡ ವಸೂಲಿ ಮಾಡಲಾಗಿದೆ.
16,528 ಟ್ರಿಪ್‍ಗಳನ್ನು ತಪಾಸಣೆ ಮಾಡಿ 3,411 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆಹಚ್ಚಿ 6.90ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ. ಇದೇ ವೇಳೆ ಮಹಿಳಾ ಪ್ರಯಾಣಿಕರಿಗೆ ಮೀಸಲಾಗಿದ್ದ, ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 445 ಪುರುಷ ಪ್ರಯಾಣಿಕರಿಂದ 44,500ರೂ. ಸೇರಿದಂತೆ 7,35,370ರೂ.ದಂಡ ವಸೂಲಿ ಮಾಡಲಾಗಿದೆ. ಅಲ್ಲದೆ, 1087 ಮಂದಿ ನಿರ್ವಾಹಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಬಿಎಂಟಿಸಿ ಪ್ರಕಟಣೆ ತಿಳಿಸಿದೆ.
Next Story