ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ದಂಪತಿ
ಬೆಂಗಳೂರು, ಜ.11: ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಹಾಗೂ ಅವರ ಪತ್ನಿ ಸುದೇಶ ಧನ್ಕರ್ ಅವರು ಇಂದು ಬೆಂಗಳೂರಿಗೆ ಆಗಮಿಸಿದರು.
ಇಂದು ಬೆಂಗಳೂರಿನ ಹೋಟೆಲ್ ವೊಂದರಲ್ಲಿ ಹಮ್ಮಿಕೊಳ್ಳಲಾಗಿರುವ ಎಲ್ಲ ರಾಜ್ಯಗಳ ಲೋಕಸೇವಾ ಆಯೋಗಗಳ 25ನೇ ರಾಷ್ಟ್ರೀಯ ಸಮ್ಮೇಳನದ ಮುಖ್ಯ ಅತಿಥಿಯಾಗಿ ಅವರು ಭಾಗವಹಿಸಲಿದ್ದಾರೆ. ನಂತರ, ಬಿಇಎಲ್ ನ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಬಿಎಚ್ ಇಎಲ್ ನಲ್ಲಿ ಹಮ್ಮಿಕೊಳ್ಳಲಾಗಿರುವ ವಿಜ್ಞಾನಿಗಳು ಮತ್ತು ಅಧಿಕಾರಿಗಳೊಂದಿಗೆ ಸಂವಾದದಲ್ಲಿ ಭಾಗವಹಿಸುವರು.
ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ದಂಪತಿಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಡಾ.ಎಂ.ಸಿ.ಸುಧಾಕರ್, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಹಾಗೂ ರಾಜ್ಯದ ಹಿರಿಯ ಅಧಿಕಾರಿಗಳು ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.
Next Story