ರಾಜ್ಯದಲ್ಲಿ ಕನಿಷ್ಠ 15 ಸ್ಥಾನಗಳನ್ನು ಗೆಲ್ಲುತ್ತೇವೆ : ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಾವು ಕನಿಷ್ಠ 15 ಸ್ಥಾನಗಳನ್ನು ಗೆಲ್ಲುತ್ತೇವೆ, ಇದು ವಾಸ್ತವ. ಆದರೆ ಸಮೀಕ್ಷಾ ವರದಿ ಇದಕ್ಕೆ ವ್ಯತಿರಿಕ್ತವಾಗಿದೆ. ಈ ಸಮೀಕ್ಷೆಯನ್ನು ನಾವು ಸಂಪೂರ್ಣ ತಳ್ಳಿಹಾಕುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸೋಮವಾರ ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರ ರಾಜಿನಾಮೆಯನ್ನು ಕೇಳಿಲ್ಲ. ಪ್ರಕರಣದ ಬಗ್ಗೆ ಈಗಾಗಲೇ ಎಸ್ಐಟಿ ತನಿಖೆ ನಡೆಸುತ್ತಿದೆ. ಪ್ರಾಥಮಿಕ ವರದಿ ಪಡೆದು ನಂತರ ತೀರ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಒಳ್ಳೆ ಮಳೆಯಾಗಿದ್ದು, ಮಳೆಗೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಈಗಾಗಲೇ ಸೂಚಿಸಲಾಗಿದೆ. ಮಳೆ ಜಾಸ್ತಿಯಾದಾಗ ಸಮಸ್ಯೆಗಳು ಉಂಟಾಗುತ್ತವೆ. ರಸ್ತೆ ಗುಂಡಿಗಳನ್ನು ಮುಚ್ಚಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
Next Story