ಧಾರ್ಮಿಕ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ ಆರೋಪ | ಯತ್ನಾಳ್ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು : ಧಾರ್ಮಿಕ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ ಆರೋಪಕ್ಕೆ ಕುರಿತು ಹಾವೇರಿ ಜಿಲ್ಲೆಯ ಬಂಕಾಪುರ ಪೊಲೀಸ್ ಠಾಣೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶಿದೆ.
ಪ್ರಕರಣ ರದ್ದು ಕೋರಿ ಯತ್ನಾಳ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ವಿಚಾರಣೆ ವೇಳೆ ಅರ್ಜಿದಾರ ಪರ ವಕೀಲ ಪಿ.ವೆಂಕಟೇಶ್ ದಳವಾಯಿ ವಾದ ಮಂಡಿಸಿ ಅರ್ಜಿದಾರರು ತಮ್ಮ ಭಾಷಣದಲ್ಲಿ ಜಾತಿ - ಧರ್ಮಗಳ ನಡುವೆ ದ್ವೇಷ ಬಿತ್ತುವ ಯಾವುದೇ ಉದ್ದೇಶ ಹೊಂದಿರಲಿಲ್ಲ. ಅರ್ಜಿದಾರರ ವಿರುದ್ಧದ ಆರೋಪಗಳೆಲ್ಲವೂ ಸತ್ಯಕ್ಕೆ ದೂರವಾದವು ಹೀಗಾಗಿ ಪ್ರಕರಣ ರದ್ದುಗೊಳಿಸುವಂತೆ ಮನವಿ ಮಾಡಿದರು.
ವಾದ, ಪ್ರತಿವಾದ ಆಲಿಸಿದ ನ್ಯಾಯಪೀಠ ಪ್ರಕರಣವನ್ನು ರದ್ದುಗೊಳಿಸಿ ಆದೇಶ ನೀಡಿದೆ.
Next Story