ಯಲ್ಲಾಪುರ, ಸಿಂಧನೂರು ರಸ್ತೆ ಅಪಘಾತ: ಮೃತರ ಕುಟುಂಬಕ್ಕೆ ಸರಕಾರದಿಂದ ತಲಾ 3 ಲಕ್ಷ ರೂ. ಪರಿಹಾರ ಘೋಷಣೆ
ಗಾಯಾಳುಗಳಿಗೆ ಉಚಿತ ಚಿಕಿತ್ಸೆಗೆ ವ್ಯವಸ್ಥೆ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಕ್ಕೆರಾಜ್ಯ ಸರಕಾರವು ತಲಾ 3 ಲಕ್ಷ ರೂ. ಪರಿಹಾರ ಘೋಷಿಸಿದೆ.
ಜೊತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ.
ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಆದ್ದರಿಂದ ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ ಎಂದು ಮುಖ್ಯಮಂತ್ರಿ 'ಎಕ್ಸ್' ಖಾತೆಯಲ್ಲಿ ಪೋಸ್ಟ್ ಹಾಕುವ ಮೂಲಕ ಮನವಿ ಮಾಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು. ಜೊತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು.ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ…
— CM of Karnataka (@CMofKarnataka) January 22, 2025
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದ ಸಮೀಪ ಬುಧವಾರ ನಸುಕಿನ ವೇಳೆ ತರಕಾರಿ ತುಂಬಿದ್ದ ಲಾರಿ ಉರುಳಿಬಿದ್ದ ಪರಿಣಾಮ 10 ಮಂದಿ ಮೃತಪಟ್ಟಿದ್ದಾರೆ. ಎಂಟಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ ಕಳೆದ ರಾತ್ರಿ ಕ್ರೂಸರ್ ವಾಹನವೊಂದು ಟೈರ್ ಸ್ಫೋಟಗೊಂಡು ಉರುಳಿಬಿದ್ದ ಪರಿಣಾಮ ಮಂತ್ರಾಲಯದ ಗುರು ಸಾರ್ವಭೌಮ ಸಂಸ್ಕೃತ ವಿದ್ಯಾಪೀಠದ ಮೂವರು ವಿದ್ಯಾರ್ಥಿಗಳು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಹತ್ತು ಮಂದಿ ಗಾಯಗೊಂಡಿದ್ದಾರೆ.