ಹಸುವಿನ ಕೆಚ್ಚಲು ಕೊಯ್ದ ಪ್ರಕರಣ | ಕುಟುಂಬಕ್ಕೆ ಮೂರು ಹಸು ಕೊಡಿಸಿದ ಝಮೀರ್ ಅಹ್ಮದ್
ಬೆಂಗಳೂರು : ಚಾಮರಾಜಪೇಟೆ ಯ ವಿನಾಯಕ ನಗರದಲ್ಲಿ ನಡೆದ ಹಸುವಿನ ಕೆಚ್ಚಲು ಕೊಯ್ದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಹಸುವಿನ ಮಾಲೀಕ ಕರ್ಣ ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಅವರಿಗೆ ಸಚಿವ ಝಮೀರ್ ಅಹ್ಮದ್ ಖಾನ್ ಅವರು ಮೂರು ಲಕ್ಷ ರೂ. ವೆಚ್ಚದಲ್ಲಿ ಮೂರು ಹಸು ಖರೀದಿಸಿ ನೀಡಿದರು.
ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಮುಖಂಡರಾದ ಅತುಶ್, ಗೌಸಿ, ವಿನಾಯಕ್, ಪ್ರಸಾದ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಅಮುದಾ, ʼಹಸು ನಿರಾಕರಿಸಿದ ನನ್ನ ಸಹೋದರನ ಪರವಾಗಿ ನಾನು ಕ್ಷಮೆ ಕೋರುತ್ತೇನೆ. ಝಮೀರಣ್ಣ ಅವರು ಒಳ್ಳೆ ಮನಸ್ಸಿನಿಂದ ಹಸು ಕೊಡಿಸಿದ್ದಾರೆ. ಕೆಲವರು ಇದರಲ್ಲಿ ರಾಜಕಾರಣ ಮಾಡುತ್ತಿದ್ದು, ನಾವು ಶಾಸಕರ ಜತೆ ಇದ್ದೇವೆʼ ಎಂದು ಹೇಳಿದರು.
Next Story