Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ಗ್ರಾಮಾಂತರ
  4. ಪ್ರತೀ ಮನೆಯಲ್ಲೂ ಪರಿಸರ ಸ್ನೇಹಿ...

ಪ್ರತೀ ಮನೆಯಲ್ಲೂ ಪರಿಸರ ಸ್ನೇಹಿ ಗಣಪನನ್ನೇ ಕೂರಿಸಿ: ಕೆ.ವಿ ಪ್ರಭಾಕರ್

ಮಕ್ಕಳಿಗೆ ಜೇಡಿ ಮಣ್ಣಿನ ಗಣಪ ಮಾಡುವ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ2 Sept 2024 11:22 AM IST
share
ಪ್ರತೀ ಮನೆಯಲ್ಲೂ ಪರಿಸರ ಸ್ನೇಹಿ ಗಣಪನನ್ನೇ ಕೂರಿಸಿ: ಕೆ.ವಿ ಪ್ರಭಾಕರ್

ಬೆಂಗಳೂರು ಆ 2: ಶ್ರಮ ಮತ್ತು ಬೆವರಿನ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಗಣಪ ನಿಜವಾದ ಪರಿಸರ ಪ್ರೇಮಿ. ಆದ್ದರಿಂದ ಪ್ರತೀ ಮನೆಯಲ್ಲೂ ಮಕ್ಕಳು ಪರಿಸರ ಸ್ನೇಹಿ ಗಣೇಶನನ್ನೇ ಕೂರಿಸಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಮಕ್ಕಳಿಗೆ ಕರೆ ನೀಡಿದರು.

ಜವಾಹರ ಬಾಲ ಭವನ ಹಮ್ಮಿಕೊಂಡಿದ್ದ, "ಮಕ್ಕಳಿಗೆ ಜೇಡಿ ಮಣ್ಣಿನ ಗಣಪ ಮಾಡುವ ಕಾರ್ಯಾಗಾರ"ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತನ್ನ ಹೊಟ್ಟೆಗೆ ಹಾವನ್ನು ಸುತ್ತಿಕೊಂಡು, ಇಲಿಯನ್ನು ವಾಹನ ಮಾಡಿಕೊಂಡಿರುವ ಗಣೇಶ ಪರಿಸರ ಪ್ರೇಮಿ. ಹೀಗಾಗಿ ಗಣೇಶ ಹಬ್ಬ ಪರಿಸರ ಸ್ನೇಹಿಯಾಗಿರಬೇಕು. ರಸಾಯನಿಕ ಬೆರೆಸಿದ ಗಣೇಶ ಮೂರ್ತಿಗಳನ್ನು ಕೆರೆಗೆ, ನದಿಗೆ, ಸಮುದ್ರಕ್ಕೆ ವಿಸರ್ಜಿಸಿ ಸಂಭ್ರಮಿಸುವುದು ಗಣೇಶನಿಗೆ ಇಷ್ಟ ಆಗುವುದಿಲ್ಲ. ಹೀಗಾಗಿ ಮಣ್ಣಿನ‌ ಗಣಪನನ್ನು ಮನೆಯಲ್ಲಿ ಕೂರಿಸಿ ಆಗ ಗಣೇಶ ಖುಷಿಯಾಗುತ್ತಾನೆ ಎಂದು ಮಕ್ಕಳಿಗೆ ಪರಿಸರ ಪಾಠ ಮಾಡಿ ಸಲಹೆ ನೀಡಿದರು.

ಮಕ್ಕಳಿಗೆ ಗಣೇಶನ ಸೃಷ್ಟಿಯ ಕತೆ ಹೇಳಿದ ಕೆ.ವಿ.ಪ್ರಭಾಕರ್ ಅವರು, ಗಣೇಶ ಆಗಿದ್ದೇ ಬೆವರಿನಿಂದ. ಶ್ರಮ ಮತ್ತು ಬೆವರಿನ ಸಂಸ್ಕೃತಿಯ ಪ್ರತೀಕ ಗಣಪ. ತಂದೆ ತಾಯಿಯರಿಗಿಂತ ದೊಡ್ಡ ದೇವರು ಯಾವುದೂ ಇಲ್ಲ ಎಂದು ಗಣೇಶ ನಂಬಿದ್ದ. ಆದ್ದರಿಂದ ತಂದೆ, ತಾಯಿಯರನ್ನು ಹೆಚ್ಚು ಗೌರವಿಸಿ, ಅವರ ಮಾತು ಕೇಳಿ ಎಂದರು.

ಮಣ್ಣಿನ‌ ಗಣಪ ಮಾಡುವ ಕಾರ್ಯಾಗಾರ ಅತ್ಯಂತ ಸೃಜನಶೀಲವಾದದು.‌ ಮಕ್ಕಳ ಸುಪ್ತ ಪ್ರತಿಭೆಗಳನ್ನು ವ್ಯಕ್ತಪಡಿಸಲು ಉಪಯುಕ್ತವಾದದು. ಇಂತಹ ವೇದಿಕೆ ಕಲ್ಪಿಸಿಕೊಟ್ಟ ಬಾಲ ಭವನದ ಅಧ್ಯಕ್ಷ ಬಿ.ಆರ್.ನಾಯ್ಡು ಅವರ ಕಾಳಜಿ ಮತ್ತು‌ ಶ್ರಮ ಅಭಿನಂದನೀಯ ಎಂದರು.

ಮಕ್ಕಳ ಬೆರಳುಗಳಲ್ಲಿ ಮೂಡಿಬಂದ ಮಣ್ಣಿನ ಗಣಪಗಳು ಅದ್ಭುತವಾಗಿದ್ದವು ಎಂದು ಶ್ಲಾಘಿಸಿದ ಪ್ರಭಾಕರ್ ಅವರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಪ್ರತೀ ಮಕ್ಕಳಿಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು. ಇದಕ್ಕೆ ಪ್ರತಿಯಾಗಿ ಮಕ್ಕಳು ತಾವು ಮಾಡಿದ್ದ ಗಣಪನನ್ನು ಪ್ರಭಾಕರ್ ಅವರಿಗೆ ಕಾಣಿಕೆಯಾಗಿ ನೀಡಿದರು.

ಚಲನಚಿತ್ರ ನಟಿ ಪ್ರೇಮಾ ಅವರು‌ ಮಕ್ಕಳಿಗೆ ಸ್ಫೂರ್ತಿದಾಯಕ ಮಾತುಗಳನ್ನಾಡಿದರು. ಬಾಲ ಭವನದ ಅಧ್ಯಕ್ಷರಾದ ಬಿ.ಆರ್.ನಾಯ್ಡು ಮತ್ತು ಅಧಿಕಾರಿಗಳು ವೇದಿಕೆಯಲ್ಲಿದ್ದರು. ಸುಮಾರು 150 ಕ್ಕೂ ಹೆಚ್ಚು ಮಕ್ಕಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.


Delete Edit



share
ವಾರ್ತಾಭಾರತಿ
ವಾರ್ತಾಭಾರತಿ
Next Story
X