ಬೆಳಗಾವಿ | ಐಗಳಿ ಪೋಲಿಸ್ ಠಾಣೆಯ ಎಎಸ್ಐ ಆತ್ಮಹತ್ಯೆ
ಬೆಳಗಾವಿ : ಮನೆಯಲ್ಲಿ ನೇಣು ಬಿಗಿದುಕೊಂಡು ಎಎಸ್ಐ ಓರ್ವ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪೂರ ಗ್ರಾಮದಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಐಗಳಿ ಪೋಲಿಸ್ ಠಾಣೆಯ ಎಎಸ್ಐ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐಗಳಿ ಪೋಲಿಸ್ ಠಾಣೆಯಲ್ಲಿ ಎಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಶಂಭು ಮೆತ್ರಿ (50) ಶುಕ್ರವಾರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಂಭು ಮೆತ್ರಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿದಿಲ್ಲ.
ಘಟನೆಯ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಥಣಿ ಪೋಲಿಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
Next Story