ಬೆಳಗಾವಿಯಲ್ಲಿ ಅಪರಿಚಿತರಿಂದ ರೌಡಿ ಶೀಟರ್ ಮೇಲೆ ಗುಂಡಿನ ದಾಳಿ
PC : freepik.com
ಬೆಳಗಾವಿ : ಬೆಳಗಾವಿ ತಾಲೂಕಿನ ಗಣೇಶಪುರದ ಹೊರವಲಯದಲ್ಲಿ ಅಪರಿಚಿತರು, ರೌಡಿಶೀಟರ್ ಪ್ರಫುಲ್ ಪಾಟೀಲ್ ಎಂಬವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೆ ಯತ್ನಿಸಿದ್ದಾರೆ.
ರೌಡಿಶೀಟರ್ ಪ್ರಫುಲ್ ಪಾಟೀಲ್ ಬೆಳಗುಂದಿ ಗ್ರಾಮದಿಂದ ಮನೆಗೆ ಹೋಗುವಾಗ ಅಪರಿಚಿತರು ಚಲಿಸುವ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ್ದು, ಕಾರಿನ ಗಾಜುಗಳು ಚೂರುಗಳು ಚುಚ್ಚಿ ಪ್ರಫುಲ್ ಮುಖ ಮತ್ತು ತಲೆಭಾಗಕ್ಕೆ ಗಾಯವಾಗಿದೆ.
ರೌಡಿಶೀಟರ್ ಪ್ರಫುಲ್ ಪಾಟೀಲ್ಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Next Story