ಬೆಳಗಾವಿ: ಚಳಿಗಾಲದ ಅಧಿವೇಶನ ವಿರೋಧಿಸಿ ಮಹಾಮೇಳಾವ್; ಎಂಇಎಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು
PC: x.com/prajavani
ಬೆಳಗಾವಿ: ವಿಧಾನಮಂಡಲ ಚಳಿಗಾಲದ ಅಧಿವೇಶನ ವಿರೋಧಿಸಿ ಸೋಮವಾರ ಧರ್ಮವೀರ ಸಂಭಾಜಿ ವೃತ್ತದಲ್ಲಿ ಮಹಾಮೇಳಾವ್ ಗೆ ಮುಂದಾದ ಎಂಇಎಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರಂಭದಲ್ಲಿ ರಾಮಲಿಂಗಖಿಂಡ ಗಲ್ಲಿಯ ಎಂಇಎಸ್ ಕಚೇರಿಯಲ್ಲಿ ಕೆಲವು ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು, ನಂತರ ಸಂಭಾಜಿ ವೃತ್ತಕ್ಕೆ ಬಂದ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
'ಬೀದರ್, ಭಾಲ್ಕಿ, ಬೆಳಗಾವಿ, ಖಾನಾಪುರ, ನಿಪ್ಪಾಣಿ, ಕಾರವಾರ ಸಂಯುಕ್ತ ಮಹಾರಾಷ್ಟ್ರ ಝಾಲಚ್ ಪಾಹಿಜೇ' ಎಂದು ಘೋಷಣೆ ಕೂಗಿದ ಕಾರ್ಯಕರ್ತರು, ತಮ್ಮನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿದರು.
ಎಂಇಎಸ್ ಮಹಾಮೇಳಾವ್ ಹಿನ್ನೆಲೆ ನಗರದ ಮೂರು ಮೈದಾನ, ಒಂದು ವೃತ್ತದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ನಗರದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಬೆಳಗಾವಿ ನಾಲ್ಕು ಪೊಲೀಸ್ ಠಾಣೆ ವ್ಯಾಪ್ತಿ ಎಂಇಎಸ್ ಜಮಾಯಿಸದಂತೆ ಭದ್ರತೆ ನಿಯೋಜನೆ ಮಾಡಲಾಗಿದ್ದು, ಡಿಸಿಪಿ ರೋಹನ್ ಜಗದೀಶ್ ನೇತೃತ್ವದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.