ಬೆಳಗಾವಿ | ಸುವರ್ಣ ಸೌಧದಲ್ಲಿ ಅನಾವರಣಗೊಂಡ ʼಅನುಭವ ಮಂಟಪʼದ ತೈಲಚಿತ್ರ
ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅನುಭವ ಮಂಟಪದ ತೈಲವರ್ಣ ಚಿತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಅನಾವರಣ ಮಾಡಿದರು.
ನಂತರ ಸ್ಪೀಕರ್ ಕೊಠಡಿಯಲ್ಲಿ ಅನುಭವ ಮಂಟಪ ತೈಲ ಕಲಾಕೃತಿಯ ಕಲಾವಿದರನ್ನು ಮುಖ್ಯಮಂತ್ರಿ ಸನ್ಮಾನಿಸಿದರು. ಇದಕ್ಕೂ ಮುನ್ನ ಮಹಾತ್ಮ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ‘ಗಾಂಧಿ ಭಾರತ’ ಲೋಗೋ ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಸ್ಪೀಕರ್ ಯು.ಟಿ.ಖಾದರ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ರಾಜ್ಯ ಸರಕಾರದ ದಿಲ್ಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.
Next Story