ಬೆಳಗಾವಿ ಅಧಿವೇಶನ | ಕ್ರೀಡಾಪಟುಗಳ ಭತ್ಯೆ ಹೆಚ್ಚಳಕ್ಕೆ ಕ್ರಮ : ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಳಗಾವಿ: ರಾಷ್ಟ್ರ ಮತ್ತು ಅಂತರ್ ರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಸ್ಪರ್ಧಿಸುವ ಕ್ರೀಡಾಪಟುಗಳಿಗೆ ಭತ್ಯೆ ಸೇರಿದಂತೆ ಪ್ರೋತ್ಸಾಹ ಧನ ಹೆಚ್ಚಳಕ್ಕೆ ಪರಿಶೀಲಿಸಿ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಭರವಸೆ ನೀಡಿದ್ದಾರೆ.
ಮಂಗಳವಾರ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಡಾ.ಭರತ್ ಶೆಟ್ಟಿ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ರಾಷ್ಟ್ರ ಮತ್ತು ಅಂತರ್ ರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಪಾಲ್ಗೊಳ್ಳುವವರಿಗೆ ಅಗತ್ಯ ತರಬೇತಿ ನೀಡಲಾಗುವುದು. ಅಲ್ಲದೆ, ಪ್ರಯಾಣ ಭತ್ಯೆ, ದಿನದ ಭತ್ಯೆ ಹೆಚ್ಚಳ ಮಾಡಲಾಗುವುದು ಎಂದರು.
ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ಅಂತರ್ ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿ, ಪದಕ ವಿಜೇತರಾದ ಕ್ರೀಡಾ ಪಟುಗಳಿಗೆ ನಗದು ಬಹುಮಾನ ಹಾಗೂ ಗರಿಷ್ಠ 50 ಸಾವಿರ ರೂ.ಗಳ ಮಿತಿಗೆ ಒಳಪಟ್ಟು ಶೈಕ್ಷಣಿಕ ಶುಲ್ಕವನ್ನು ಮರುಪಾವತಿ ರೂಪದಲ್ಲಿ ಪ್ರೋತ್ಸಾಹಧನ ನೀಡಲಾಗುವುದು. ಕ್ರೀಡಾ ತರಬೇತಿಗೆ ವಿಶೇಷ ಪ್ರೋತ್ಸಾಹಧವನ್ನು ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದರು.