ಕಾಗವಾಡ ಶಾಸಕ ರಾಜು ಕಾಗೆ ಅವರ ಪುತ್ರಿ ಕೃತಿಕಾ ನಿಧನ

ಬೆಂಗಳೂರು : ಕಾಗವಾಡದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರ ಪುತ್ರಿ ಕೃತಿಕಾ ಕಾಗೆ ಇಂದು(ಶನಿವಾರ) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಕೃತಿಕಾ ಕಾಗೆ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ನಾಳೆ ಬೆಳಿಗ್ಗೆ 10 ಗಂಟೆಗೆ ಕಾಗವಾಡ ಶಾಸಕ ರಾಜು ಕಾಗೆ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆಗೆ ನರೆವೇರಲಿದೆ.
Next Story