ಬೀದರ್ : ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ
ಬೀದರ್ : ಜಿಲ್ಲೆಯ ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್ ರವೀಂದ್ರ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಅರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಆದಾಯಕ್ಕಿಂತ ಹೆಚ್ಚಿನ ಗಳಿಕೆ ಆರೋಪ ಹಿನ್ನೆಲೆ ಲೋಕಾಯುಕ್ತ ಡಿವೈಎಸ್‌ಪಿ ಹನುಮಂತರಾಯ ನೇತೃತ್ವದಲ್ಲಿ 3 ತಂಡ ರಚಿಸಿ ಬುಧವಾರ ಬೆಳ್ಳಂ ಬೆಳಿಗ್ಗೆ ಮೂರು ಕಡೆ ದಾಳಿ ನಡೆಸಲಾಗಿದೆ.
ಬಸವಕಲ್ಯಾಣ ಸಣ್ಣ ನೀರಾವರಿ ಇಲಾಖೆಯ ಎಇ ರವೀಂದ್ರ ಅವರ ಬೀದರ್ ನ ಚಿಕ್ಕಪೇಟ್ ಹಾಗೂ ಭಾಲ್ಕಿ ತಾಲೂಕಿನ ಡೋಣಗಾಪುರ ಗ್ರಾಮದಲ್ಲಿರುವ ಮನೆ ಸೇರಿ ಅವರ ಕಚೇರಿಯ ಮೇಲೆಯೂ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
Next Story