ಜ.9ರ ಬೀದರ್ ಬಂದ್ ಕರೆಗೆ ಅಂಬೇಡ್ಕರ್ ಸೇವಾ ಸಮಿತಿ ಬೆಂಬಲ
ಬೀದರ್ : ಜ.9ರ ಬೀದರ್ ಬಂದ್ ಕರೆಗೆ ಅಂಬೇಡ್ಕರ್ ಸೇವಾ ಸಮಿತಿ ಬೆಂಬಲ ಬೆಂಬಲ ನೀಡಲಿದೆ ಎಂದು ಅಂಬೇಡ್ಕರ್ ಸೇವಾ ಸಮಿತಿ ಜಿಲ್ಲಾ ಉಪಾಧ್ಯಕ್ಷ ಸಿದ್ಧಾರ್ಥ್ ನಾಟಿಕರ್ ಹೇಳಿದ್ದಾರೆ.
ಸಂಸತ್ತಿನ ಅಧಿವೇಶನದಲ್ಲಿ ಭಾರತೀಯ ಸಂವಿಧಾನಕ್ಕೆ 75 ವರ್ಷಗಳು ತುಂಬಿದ ಹಿನ್ನಲೆ ಸಂಸತ್ತಿನ ಅಧಿವೇಶನದಲ್ಲಿ ನಡೆದ ಚರ್ಚೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವಾಗ ಅಂಬೇಡ್ಕರ್ ಅವರನ್ನು ಅವಮಾನ ಮಾಡಿದ್ದಾರೆ. ಇದನ್ನು ವಿರೋಧಿಸಿ ಸ್ವಾಭಿಮಾನಿ ಡಾ.ಬಿ.ಆರ್.ಅಂಬೇಡ್ಕರ್ ವಾದಿಗಳ ಹೋರಾಟ ಸಮಿತಿಯು ಬೀದರ್ ಬಂದ್ ಗೆ ಕರೆ ನೀಡಿದೆ. ಈ ಬಂದ್ ಕರೆಗೆ ನಮ್ಮ ಸಂಘಟನೆ ಸಂಪೂರ್ಣವಾಗಿ ಬೆಂಬಲ ಸೂಚಿಸಿದೆ ಎಂದು ತಿಳಿಸಿದ್ದಾರೆ.
ನಾವೆಲ್ಲರೂ ಒಗ್ಗಟ್ಟಾಗಿ ಮನುವಾದಿ ಬಿಜೆಪಿ ಮತ್ತು ಅಮಿತ್ ಶಾ ಅವರಿಗೆ ತಕ್ಕ ಪಾಠ ಕಲಿಸಬೇಕಿದೆ. ಹಾಗಾಗಿ ಬೀದರ್ ಬಂದ್ ಕರೆಗೆ ಜಿಲ್ಲೆಯ ಎಲ್ಲ ಸಾರ್ವಜನಿಕರು ಸಹಕರಿಸಿ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.
Next Story