ಎಟಿಎಂ ದರೋಡೆ ಪ್ರಕರಣ : ಹೈದರಾಬಾದ್ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ್ : ಎಟಿಎಂ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆದ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಹೈದರಾಬಾದ್ ನ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವಕುಮಾರ್ ಎಂಬ ಸಿಬ್ಬಂದಿಯನ್ನು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ.
ಇಂದು ಹೈದರಾಬಾದ್ ಗೆ ತೆರಳಿ, ಗಾಯಾಳು ಶಿವಕುಮಾರ್ ಚಿಕಿತ್ಸೆ ಪಡೆಯುತ್ತಿರುವ ಕೇರ್ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ ಆಸ್ಪತ್ರೆಯ ವೈದ್ಯರೊಂದಿಗೆ ಚಿಕಿತ್ಸೆ ಬಗ್ಗೆ ಚರ್ಚೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ನಿನ್ನೆ ಬೆಳಿಗ್ಗೆ ಎಟಿಎಂಗೆ ಹಣ ಹಾಕಲು ಎಸ್.ಬಿ.ಐ ಬ್ಯಾಂಕಿನಿಂದ ಹಣ ತೆಗೆದುಕೊಂಡು ಹೊರ ಬರುತಿದ್ದಾಗ ಎಸ್ ಬಿ ಐ ನ ಎಟಿಎಂ ಸೆಕ್ಯೂರಿಟಿ ಎಜೆನ್ಸಿ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆದಿತ್ತು. ಗುಂಡಿನ ದಾಳಿಯಲ್ಲಿ ಗಿರೀಶ್ ಎಂಬ ಸಿಬ್ಬಂದಿ ಮೃತಪಟ್ಟಿದ್ದು, ಶಿವಕುಮಾರ್ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಗೊಂಡಿದ್ದ ಸಿಬ್ಬಂದಿಗೆ ಹೈದರಾಬಾದ್ ನ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Next Story