ಡಿ.9 ರಂದು ಬೀದರ್ ಬಂದ್ ಹಿನ್ನಲೆ : ತಾಲ್ಲೂಕಿನ ಶಾಲಾ-ಕಾಲೇಜಿಗೆ ರಜೆ ಘೋಷಣೆ
ಸಾಂದರ್ಭಿಕ ಚಿತ್ರ
ಬೀದರ್ : ಅಮಿತ್ ಶಾ ಅವರ ವಿರುದ್ಧ ದಲಿತ ಸಂಘಟನೆಗಳು ನಾಳೆ ಬೀದರ್ ಬಂದ್ ಗೆ ಕರೆ ನೀಡಿದ್ದ ಹಿನ್ನಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಲ್.ಪ್ರಸನ್ನಕುಮಾರ್ ಅವರು ಬೀದರ್ ತಾಲೂಕಿನ ಎಲ್ಲ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಸುತ್ತೋಲೆ ಹೊರಡಿಸಿದ್ದಾರೆ.
ಸಂಸತ್ತಿನಲ್ಲಿ ಅಮಿತ್ ಶಾ ಅವರು ಅಂಬೇಡ್ಕರ್ ಅವರನ್ನು ಅವಮಾನ ಮಾಡುವ ರೀತಿಯಲ್ಲಿ ಮಾತನಾಡಿದ್ದಾರೆ. ಅವರು ಕ್ಷೇಮೆ ಕೇಳಿ ರಾಜೀನಾಮೆ ನೀಡುವುದಕ್ಕೆ ಗಡುವು ನೀಡಿದ್ದೆವು. ಆದರೆ ಇಲ್ಲಿವರೆಗೆ ಅವರು ಕ್ಷಮೆಯು ಕೇಳಲಿಲ್ಲ, ರಾಜೀನಾಮೆಯು ನೀಡಲಿಲ್ಲ. ಇದನ್ನು ವಿರೋಧಿಸಿ ಸ್ವಾಭಿಮಾನಿ ಡಾ.ಬಿ.ಆರ್.ಅಂಬೇಡ್ಕರ್ ವಾದಿಗಳ ಹೋರಾಟ ಸಮಿತಿ ಡಿ.9 ರಂದು ಬೀದರ್ ಬಂದ್ ಗೆ ಕರೆ ನೀಡಿತ್ತು. ಈ ಬಂದ್ ಗೆ ವಿವಿಧ ದಲಿತ ಸಂಘಟನೆಗಳು ಬೆಂಬಲ ನೀಡಿದ್ದವು.
ಬೀದರ್ ಬಂದ್ ಆಚರಿಸುತ್ತಿರುವ ನಿಮಿತ್ಯ ಶಾಲಾ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುಂಜಾಗೃತ ಕ್ರಮವಾಗಿ ಬೀದರ್ ತಾಲ್ಲೂಕಿನ ಸರ್ಕಾರಿ, ಅನುದಾನಿತ, ಅನುದಾನ ರಹಿತ ಎಲ್ಲ ಶಾಲಾ, ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ರಜೆ ಘೋಷಿಸಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.