ಬೀದರ್ | ರಸ್ತೆ ವಿಭಜಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಇಬ್ಬರು ಮೃತ್ಯು

ಬೀದರ್: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬಸವಕಲ್ಯಾಣ ನಗರದ ತ್ರಿಪುರಾಂತ ಬಳಿ ಸೋಮವಾರ ರಾತ್ರಿ ಸಂಭವಿಸಿದೆ.
ನಗರದ ತ್ರಿಪುರಾಂತ ನಿವಾಸಿ ಪಿಕೆಪಿಎಸ್ ಸದಸ್ಯ ಗುಂಡಪ್ಪ ಬಿರಾದಾರ್ ಹಾಗೂ ಉಮೇಶ್ ರಾಜೋಳೆ ಮೃತಪಟ್ಟ ವ್ಯಕ್ತಿಗಳಾಗಿದ್ದಾರೆ.
ಸಸ್ತಾಪೂರ ಬಂಗ್ಲಾದಿಂದ ಬಸವಕಲ್ಯಾಣದ ಕಡೆಗೆ ಕಾರಿನಲ್ಲಿ ಬರುತ್ತಿದ್ದ ಕಾರು ತ್ರಿಪುರಾಂತ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್ ಮೇಲೇರಿದ್ದಲ್ಲದೆ ಅಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮವಾಗಿ ಕಾರಲ್ಲಿರುವ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆದಿಸಿದ್ದು, ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
Next Story