ಬೀದರ್ | ಯಾತ್ರಿಕರ ದುರ್ಮರಣ; ಮೃತರ ನಿವಾಸಕ್ಕೆ ಸಂಸದ ಸಾಗರ್ ಖಂಡ್ರೆ ಭೇಟಿ

ಬೀದರ್ : ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿ ಮೃತಪಟ್ಟವರ ಮನೆಗೆ ಸಂಸದ ಸಾಗರ್ ಖಂಡ್ರೆ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳಿದ ಬೀದರ್ ಜಿಲ್ಲೆಯ ಯಾತ್ರಿಕರ ಭೀಕರ ರಸ್ತೆ ಅಪಘಾತದ ಸುದ್ದಿ ಅಘಾತ ತಂದಿದೆ. ಆ ಕುಟುಂಬಸ್ಥರ ದುಃಖದಲ್ಲಿ ನಾವು ಸಹಭಾಗಿಯಾಗಿದ್ದೇವೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಈಗಾಗಲೇ ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ನಾನು ಸಹ ಸರ್ಕಾರದಿಂದ ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ಮತ್ತು ನೆರವು ಒದಗಿಸಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಈ ದಾರುಣ ಘಟನೆಯಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಸಿಗಲಿ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
Next Story