ಬೀದರ್ | ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕಿರಾಣಿ ಅಂಗಡಿಗೆ ಬೆಂಕಿ : ಲಕ್ಷಾಂತರ ರೂ. ನಷ್ಟ
ಬೀದರ್ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಂಗಡಿಯೊಂದಕ್ಕೆ ಬೆಂಕಿ ತಗುಲಿ, 11 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ಬಸವಕಲ್ಯಾಣ ತಾಲ್ಲೂಕಿನ ಸಸ್ತಾಪುರ್ ಬಂಗ್ಲಾದ ಹತ್ತಿರ ನಡೆದಿದೆ.
ಜ.11 ರ ರಾತ್ರಿ ವ್ಯವಹಾರ ಮುಗಿದ ನಂತರ ಕಿರಾಣಿ ಅಂಗಡಿಯ ಮಾಲಕ, ಸಸ್ತಾಪುರದ ನಿವಾಸಿಯಾದ ಮಹೇಶರೆಡ್ಡಿ ಬಾಬುರೆಡ್ಡಿ ವಡಮುರಗೆ ಅವರು ತಮ್ಮ ಅಂಗಡಿಯನ್ನು ಮುಚ್ಚಿಕೊಂಡು ಮನೆಗೆ ಹೋಗಿದ್ದರು. ರಾತ್ರಿ ಸುಮಾರು 3 ಗಂಟೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗಲಿ ಸಂಪೂರ್ಣವಾಗಿ ಹಾನಿಯಾಗಿದೆ.
ಸುದ್ಧಿ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಅಂಗಡಿಗಳಲ್ಲಿನ ವಸ್ತುಗಳು ಸುಟ್ಟು ಕರಕಲಾಗಿದ್ದವು ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಭೇಟಿ ನೀಡಿದ ಬಸವಕಲ್ಯಾಣ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.
Next Story