ರೈತರ ಹಿತಕ್ಕಾಗಿ ನಾನಿದ್ದೇನೆ : ಸಂಸದ ಸಾಗರ್ ಖಂಡ್ರೆ
ಸಾಗರ್ ಖಂಡ್ರೆ
ಬೀದರ್ : ವಕ್ಫ್ ಆಸ್ತಿಯ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಲಾದ ನೋಟಿಸ್ಗಳನ್ನು ತಕ್ಷಣ ವಾಪಸ್ ಪಡೆಯಬೇಕೆಂದು ಸರಕಾರ ಆದೇಶಿಸಿದೆ ಎಂದು ಸಂಸದ ಸಾಗರ್ ಖಂಡ್ರೆ ತಿಳಿಸಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಬಂಧಪಟ್ಟ ಸಚಿವರೊಂದಿಗೆ ಸಭೆ ನಡೆಸಿ, ವಕ್ಫ್ ಕುರಿತು ಯಾವುದೇ ನೋಟಿಸ್ ನೀಡಿದಲ್ಲಿ ಅದನ್ನು ತಕ್ಷಣ ವಾಪಸ್ ಪಡೆಯಲು ಹಾಗೂ ವಿಚಾರಣೆ ಇಲ್ಲದೆ ಪಹಣಿ ದಾಖಲೆಗಳಲ್ಲಿ ಬದಲಾವಣೆ ಮಾಡಿದ್ದರೆ ಅದನ್ನು ರದ್ದುಗೊಳಿಸಲು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ಮುಂದೆ ರೈತರಿಗೆ ಯಾವುದೇ ರೀತಿಯ ತೊಂದರೆ ಬರುವುದಿಲ್ಲ ಎಂದು ಭರವಸೆ ನೀಡುತ್ತೇನೆ. ಬೀದರ್ ಲೋಕಸಭೆ ಕ್ಷೇತ್ರದ ಜನಪ್ರತಿನಿಧಿಯಾಗಿ, ರೈತರ ಹಿತಾಸಕ್ತಿ ಮತ್ತು ಹಕ್ಕುಗಳನ್ನು ರಕ್ಷಿಸುವುದು ನನ್ನ ಪ್ರಥಮ ಆದ್ಯತೆಯಾಗಿದ್ದು, ರೈತರಿಗೆ ಅನ್ಯಾಯವಾಗದಂತೆ ಮತ್ತು ರೈತರ ಹಿತಕ್ಕಾಗಿ ಯಾವುದೇ ತ್ಯಾಗ ಮಾಡಲು ನಾನು ಸಿದ್ಧನಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story