ಬೀದರ್ | ನರೇಗಾ ಯೋಜನೆ ಅಡಿಯಲ್ಲಿ ಅನ್ಯಾಯ : ಕಾರ್ಮಿಕರಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ
ಬೀದರ್ : ಕೇಂದ್ರ ಸರಕಾರದ ನರೇಗಾ ಯೋಜನೆ ಅಡಿಯಲ್ಲಿ ಕಾರ್ಮಿಕರಿಗೆ ಅನ್ಯಾಯವಾಗುತ್ತಿದ್ದು,100 ದಿನಗಳ ಕಾಲ ಕೆಲಸ ಸಿಗುತ್ತಿಲ್ಲ ಎಂದು ಕಾರ್ಮಿಕರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ವರ್ಷದಿಂದ ವರ್ಷಕ್ಕೆ ಕೇಂದ್ರ ಸರಕಾರ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ, ಬಜೆಟಲ್ಲಿನ ಹಣ ಕಡಿತಗೊಳಿಸುತ್ತಿದೆ. ಸರಿಯಾದ ಸಮಯಕ್ಕೆ ಕಾರ್ಮಿಕರ ಕೂಲಿ ಪಾವತಿಯಾಗುತ್ತಿಲ್ಲ. ನೂರು ದಿನಗಳ ಬದಲಾಗಿ 200 ದಿನಗಳು ಕಾಲ ಕೆಲಸ ನೀಡಬೇಕು ಎಂದು ಆಗ್ರಹಿಸಿದರು.
ದಿನಕ್ಕೆ 600 ರೂ. ಕೂಲಿ ನೀಡಬೇಕು. ಕೆಲಸದ ಸಮಯದಲ್ಲಿ ಕಾರ್ಮಿಕರು ಸಾವನ್ನಪ್ಪಿದರೆ 5 ಲಕ್ಷ ರೂ. ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು, ನಮ್ಮ ಬೇಡಿಕೆ ಈಡೇರದಿದ್ದರೆ ದಿಲ್ಲಿಯಲ್ಲಿ ಬೃಹತ್ ಪ್ರತಿಭಟನೆ ಮಾಡುವುದಾಗಿ ಕಾರ್ಮಿಕರು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಸಪ್ನಾದೀಪಾ, ಗೀತಾ, ರೇಷ್ಮಾ, ಅನ್ನಪೂರ್ಣ, ಫಿಲೋಮನ್, ಸುಶೀಲಾ, ಕಲಾವತಿ, ಸುರೇಖಾ, ರೇಖಾ ಸೇರಿದಂತೆ ನೂರಾರು ಕಾರ್ಮಿಕರು ಭಾಗವಹಿಸಿದ್ದರು.
Next Story