ಬೀದರ್ | ರಾಜ್ಯ ಮಟ್ಟದ ಸೂಫಿ, ಸಂತರ ಸಾಂಸ್ಕೃತಿಕ ಉತ್ಸವಕ್ಕೆ ಸಚಿವರಿಗೆ ಆಮಂತ್ರಣ
ಬೀದರ್ : ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದಿಂದ ಜ.11 ಮತ್ತು 12ರಂದು ನಡೆಯಲಿರುವ ರಾಜ್ಯ ಮಟ್ಟದ ಸೂಫಿ ಸಂತರ ಸಾಂಸ್ಕೃತಿಕ ಉತ್ಸವ ಹಾಗೂ ತತ್ವ ಪದಕಾರರ ಭಜನೆ ಸ್ಪರ್ಧೆ ಕಾರ್ಯಕ್ರಮಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಅವರಿಗೆ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಆಗಮಿಸುವಂತೆ ಸಚಿವರಿಗೆ ಸನ್ಮಾನಿಸಿ ಆಮಂತ್ರಣ ಪತ್ರ ನೀಡಿ ಒಕ್ಕೂಟದ ವತಿಯಿಂದ ಮನವಿ ಮಾಡಲಾಯಿತು.
ಸಚಿವ ತಂಗಡಿಯವರು ಕಾರ್ಯಕ್ರಮಕ್ಕೆ ಬರುವುದಾಗಿ ಭರವಸೆ ನೀಡಿದ್ದಾರೆ ಎಂದು ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷ ವಿಜಯಕುಮಾರ್ ಸೋನಾರೆ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ ಜಿಲ್ಲೆಯ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನಿಸಲಾಗುವುದು ಎಂದು ಮಾಹಿತಿ ನೀಡಿದರು.
ಅಂಬರೀಶ್ ಮಲ್ಲೇಶಿ, ಸುನೀಲ್ ಭಾವಿಕಟ್ಟಿ, ವಿಜಯಕುಮಾರ್ ಅಷ್ಟೂರೆ, ಚಂದ್ರಕಾಂತ್ ಹಳ್ಳಿಖೇಡಕರ್ ಮುಂತಾದವರು ಉಪಸ್ಥಿತರಿದ್ದರು.
Next Story