ಬೀದರ್ | ಚಾಕುವಿನಿಂದ ಇರಿದು ವ್ಯಕ್ತಿಯ ಹತ್ಯೆ : ಪ್ರಕರಣ ದಾಖಲು

ಬೀದರ್ : ನಗರದ ಹೊರ ವಲಯದ ಅಲಿಯಾಬಾದ್ ರಿಂಗ್ ರೋಡ್ ಬಳಿ ಇರುವ ಎಸ್.ಕೆ.ಧಾಬಾದ ಹತ್ತಿರ ವ್ಯಕ್ತಿಯೊರ್ವನನ್ನು ಹತ್ಯೆ ಮಾಡಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಹೊನ್ನಿಕೇರಿ ಗ್ರಾಮದ ನಿವಾಸಿ ವೈಜಿನಾಥ್ (50) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಇಂದು ಮಧ್ಯಾಹ್ನದ ಸಮಯದಲ್ಲಿ ಅಪರಿಚಿತರು ಚಾಕುವಿನಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತ ದೇಹವನ್ನು ಬ್ರಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎನ್ನಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ನೂತನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದು, ತನಿಖೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.
Next Story