ಬೀದರ್ | ಪೊಕ್ಸೋ ಪ್ರಕರಣ : ಆರೋಪಿಗೆ 35 ವರ್ಷ ಜೈಲು, ದಂಡ

ಬೀದರ್ : ಪೊಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 35 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 70 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಗುರುವಾರ ಆದೇಶಿಸಿದೆ.
ತೆಲಂಗಾಣ ರಾಜ್ಯದ ಸಂಗಾರೆಡ್ಡಿಯ ಯಲ್ಗೊಯಿ ಮೂಲದ ನಿವಾಸಿ ರಾಜು (25) ಶಿಕ್ಷೆಗೊಳಗಾದ ಆರೋಪಿ.
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಹಿನ್ನೆಲೆಯಲ್ಲಿ ಈತನ ವಿರುದ್ಧ ಜನವಾಡ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ದೋಷಾರೋಪಣೆ ಪತ್ರ ಸಲ್ಲಿಸಿದ ನಂತರ ಇದೀಗ ಈ ಪ್ರಕರಣ ಬಗ್ಗೆ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶರಾದ ಸಚಿನ್ ಕೌಶಿಕ್ ಆರ್.ಎನ್. ಅವರು ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
Next Story