ಬೀದರ್ | ಪೋಕ್ಸೊ ಪ್ರಕರಣ; ಆರೋಪಿಗೆ 28 ವರ್ಷ ಜೈಲು ಶಿಕ್ಷೆ

ಬೀದರ್ : ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾಗಿದ್ದರಿಂದ ಬುಧವಾರ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯವು 28 ವರ್ಷ ಜೈಲು ಹಾಗೂ 70 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.
ಬೆನಕನಹಳ್ಳಿ ಗ್ರಾಮದ ನಿವಾಸಿ ಇಮ್ಯಾನುವೆಲ್ ಶಿಕ್ಷೆಗೊಳಗಾದ ಆರೋಪಿ ಎಂದು ಗುರುತಿಸಲಾಗಿದೆ.
2018ರಲ್ಲಿ ಬೆನಕನಳ್ಳಿ ಗ್ರಾಮದ ಅಪ್ರಾಪ್ತ ಬಾಲಕಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರ ಎಸೆಯಲಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಜನವಾಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಆರೋಪಿಯನ್ನು ಬಂಧಿಸಲಾಗಿತ್ತು. ಇದೀಗ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯವು ಈ ಪೊಕ್ಸೋ ಪ್ರಕರಣ ಆರೋಪಿಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
Next Story