Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ವಕ್ಫ್ ತಿದ್ದುಪಡಿ ಕಾಯ್ದೆ...

ಬೀದರ್ | ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಎ.24ರಂದು ಪ್ರತಿಭಟನೆ : ಅಬ್ದುಲ್ ಖಾದೀರ್

ವಾರ್ತಾಭಾರತಿವಾರ್ತಾಭಾರತಿ20 April 2025 8:26 PM IST
share
ಬೀದರ್ | ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಎ.24ರಂದು ಪ್ರತಿಭಟನೆ : ಅಬ್ದುಲ್ ಖಾದೀರ್

ಬೀದರ್ : ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಕಾಯ್ದೆ 2025 ಜಾರಿಗೊಳಿಸಿರುವುದನ್ನು ವಿರೋಧಿಸಿ ಎ.24 ರಂದು ವಕ್ಫ್ ತಿದ್ದುಪಡಿ ಕಾಯ್ದೆ 2025 ವಿರೋಧಿ ಜಂಟಿ ಕ್ರಿಯಾ ಸಮಿತಿಯು ನಗರದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಸಮಿತಿಯ ಸಂಚಾಲಕ ಹಾಗೂ ಅಖಿಲ ಭಾರತ ಮುಸ್ಲಿಮ್ ವೈಯಕ್ತಿಕ ಕಾನೂನು ಮಂಡಳಿ ಸದಸ್ಯ ಅಬ್ದುಲ್ ಖಾದೀರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಕ್ಫ್ ತಿದ್ದುಪಡಿ ಕಾಯ್ದೆ 2025 ಜಾರಿ ಖಂಡಿಸಿ ಪ್ರತಿಭಟನೆಗೆ ಎಲ್ಲ ಮುಸ್ಲಿಮ್ ಸಂಘಟನೆಗಳು ಹಾಗೂ ನಾಗರಿಕರನ್ನು ಒಳಗೊಂಡ ಜಂಟಿ ಕ್ರಿಯಾ ಸಮಿತಿ ರಚಿಸಿದ್ದು, ಸಮಿತಿಯ ನಿರ್ಣಯದಂತೆ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ಅಂದು ಬೆಳಿಗ್ಗೆ 10 ಗಂಟೆಗೆ ಜಾಮಿಯಾ ಮಸೀದಿಯಿಂದ ಮೆರವಣಿಗೆ ಮೂಲಕ ಮುಹಮದ್ ಗಾವಾನ್ ಚೌಕ್, ಮುಖ್ಯರಸ್ತೆ, ಕ್ರಾಂತಿ ಗಣೇಶ್ ಮಾರ್ಗವಾಗಿ ಅಂಬೇಡ್ಕರ್ ವೃತ್ತಕ್ಕೆ ತಲುಪಿ ಅಲ್ಲಿ ಸಾರ್ವಜನಿಕ ಸಭೆ ನಡೆಸಲಾಗುವುದು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ರಾಷ್ಟ್ರಪತಿ ಅವರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ವಕ್ಫ್ ತಿದ್ದುಪಡಿ ಕಾಯ್ದೆ 2025 ಜಾರಿಯಿಂದಾಗಿ ವಕ್ಫ್ ಆಸ್ತಿ ಸರ್ಕಾರದ ಪಾಲಾಗಲಿದೆ. ಮುಸ್ಲಿಮ್ ಸಮುದಾಯಕ್ಕೆ ಸಿಗುವ ಸೌಲಭ್ಯಗಳು ಮೊಟಕುಗೊಳ್ಳಲಿವೆ. ಮುಸ್ಲಿಮರನ್ನು ದಮನಿಸುವ ಉದ್ದೇಶ ಹೊಂದಿರುವ ಈ ಕಾಯ್ದೆಯು ಸಂವಿಧಾನ ವಿರೋಧಿಯಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಕಾಯ್ದೆಯು ಸಂವಿಧಾನ ನೀಡಿರುವ ಹಲವು ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳಲಿದೆ. ಸಂವಿಧಾನದ ಕಲಂ 14, 15, 25, 26 ಹಾಗೂ 29 ಕ್ಕೆ ಇದು ಸಂಪೂರ್ಣವಾಗಿ ವಿರುದ್ಧವಾಗಿದ್ದು, ಈ ಕಾಯ್ದೆಗೆ ದೇಶದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಸುಪ್ರೀಂಕೋರ್ಟ್‍ನಲ್ಲಿ ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದಾರೆ. ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ನೇತೃತ್ವದಲ್ಲಿ ಕಾಯ್ದೆ ಹಿಂಪಡೆಯಲು ಒತ್ತಾಯಿಸಿ ರಾಷ್ಟ್ರದಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ..

ದೇಶದ ಸಂವಿಧಾನ, ಜಾತ್ಯತೀತ ಸಿದ್ಧಾಂತ ಹಾಗೂ ಬಹುತ್ವ ಸಂಸ್ಕೃತಿಯಲ್ಲಿ ನಂಬಿಕೆ ಹೊಂದಿರುವ ಪ್ರಜ್ಞಾವಂತ ನಾಗರಿಕರು ಈ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X