ಬೀದರ್ | ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ : ನಗರಕ್ಕೆ ಸಿಐಡಿ ತಂಡ ಭೇಟಿ, ತನಿಖೆ ಚುರುಕು
ಬೀದರ್ : ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದ ಹಿನ್ನೆಲೆ ಇಂದು ನಗರಕ್ಕೆ ಸಿಐಡಿ ತಂಡ ಭೇಟಿ ನೀಡಿದ್ದು, ತನಿಖೆ ಚುರುಕುಗೊಳಿಸಿದೆ.
ಇಂದು ಎಸ್ಪಿ ಕಚೇರಿಗೆ ಭೇಟಿ ನೀಡಿ, ಅಧಿಕಾರಿಗಳ ಹತ್ತಿರ ಮಾಹಿತಿ ಪಡೆದ ಸಿಐಡಿ ತಂಡವು, ಬಳಿಕ ರೈಲ್ವೆ ಪೊಲೀಸ್ ಠಾಣೆಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದೆ.
ಡಿ.26 ರಂದು ನಗರದಲ್ಲಿ ರೈಲ್ವೆಗೆ ತೆಲೆಕೊಟ್ಟು ಸಚಿನ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಹಾಗೂ ಇತರರಿಂದ ಜೀವ ಬೆದರಿಕೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಬಗ್ಗೆ ಸಚಿನ್ 7 ಪುಟದ ಡೆತ್ ನೋಟ್ ಬರೆದಿಟ್ಟಿದ್ದರು.
ಪ್ರಕರಣದೊಂದಿಗೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರು ಥಳಕು ಹಾಕಿಕೊಂಡ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿದೆ. ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ಬಿಜೆಪಿ ಒತ್ತಾಯಿಸಿದೆ. ಇದೀಗ ಸಿಐಡಿ ತಂಡ ತನಿಖೆ ಆರಂಭಿಸಿದೆ.
Next Story