Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಆರೋಗ್ಯವಂತ ಜೀವನಕ್ಕೆ ಕ್ರೀಡೆ...

ಬೀದರ್ | ಆರೋಗ್ಯವಂತ ಜೀವನಕ್ಕೆ ಕ್ರೀಡೆ ಬಹುಮುಖ್ಯ : ಸಚಿವ ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ5 April 2025 8:21 PM IST
share
Photo of Program

ಬೀದರ್ : ಕ್ರೀಡೆ ನಮ್ಮನ್ನು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢರನ್ನಾಗಿ ಮಾಡುತ್ತದೆ. ಹಾಗೆಯೇ ಆರೋಗ್ಯವಂತ ಜೀವನಕ್ಕೆ ಕ್ರೀಡೆ ಬಹು ಮುಖ್ಯ ಎಂದು ಅರಣ್ಯ, ಪರಿಸರ ಹಾಗೂ ಜೀವಶಾಸ್ತ್ರ ಮತ್ತು ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ತಿಳಿಸಿದರು.

ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ನಗರದ ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಾಚೀನ ಕಾಲದಿಂದಲೂ ಕ್ರೀಡೆಯು ಮಹತ್ವವಾದ ಸ್ಥಾನ ಪಡೆದಿದೆ. ರಾಮಾಯಣ, ಮಹಾಭಾರತದ ಕಾಲದಲ್ಲಿ ರಾಜರು ಕ್ರೀಡಾಕೂಟ ಏರ್ಪಡಿಸುತ್ತಿದ್ದರು. ಕ್ರೀಡೆ ಆಧುನಿಕ ಜಗತ್ತಿನಲ್ಲಿ ಅತ್ಯಂತ ಜನಪ್ರಿಯ ಮತ್ತು ಮಹತ್ವವನ್ನು ಪಡೆದಿರುವುದನ್ನು ನಾವು ಕಾಣಬಹುದು ಎಂದರು.

ರಾಜ್ಯ ಮಟ್ಟದ ಕ್ರೀಡಾಕೂಟ, ರಾಷ್ಟ್ರೀಯ ಕ್ರೀಡಾಕೂಟ, ಏಷ್ಯನ್ ಕ್ರೀಡಾಕೂಟ ಮತ್ತು ಒಲಿಂಪಿಕ್ಸ್ ಕ್ರೀಡಾಕೂಟ ನಡೆಯುತ್ತಿವೆ. ಅದರಲ್ಲಿ ಅನೇಕ ಯುವ ಪೀಳಿಗೆ ತಮ್ಮ ಪ್ರತಿಭೆಯ ಮೂಲಕ ಜಗತ್ತಿಗೆ ಗುರುತಿಸಿಕೊಳ್ಳುತ್ತಾರೆ. ಕ್ರೀಡೆಯಲ್ಲಿ ಸಾಧನೆ ಮಾಡಿದವರಿಗೆ ಅನೇಕ ಪ್ರಶಸ್ತಿ ನೀಡಲಾಗುತ್ತಿದೆ. ಏಕಲವ್ಯ ಪ್ರಶಸ್ತಿ, ಮೇಜರ್ ಧ್ಯಾನಚಂದ್ ಖೇಲ್ ರತ್ನಾ ಪ್ರಶಸ್ತಿ, ಪದ್ಮ ಪ್ರಶಸ್ತಿ ಮತ್ತು ಸಚಿನ್ ತೆಂಡುಲ್ಕರ್ ಅವರಿಗೆ ಕ್ರೀಡಾ ವಿಭಾಗದಲ್ಲಿ ಭಾರತ ರತ್ನವನ್ನು ನೀಡಲಾಗಿದೆ. ಯುವ ಪೀಳಿಗೆ ಯಾವುದೇ ದುಶ್ಚಟಗಳಿಗೆ ಬಲಿಯಾಗದೆ, ಉತ್ತಮ ಜೀವನವನ್ನು ಕಟ್ಟಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ, ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸೋಮಶೇಖರ್ ಬಿರಾದಾರ್ ಚಿದ್ರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ್ ಮಠ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಪ್ರಭುಲಿಂಗ್ ತುಗಾಂವೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ರಾಜಕುಮಾರ್ ಮಾಳಿಗೆ, ಕೋಶಾಧ್ಯಕ್ಷ ದೇವಪ್ಪ ಚಾಂಬೋಳೆ, ಗೌರವಾಧ್ಯಕ್ಷ ಸೂರ್ಯಕಾಂತ್ ಬಿರಾದಾರ್, ಕಾರ್ಯಾಧ್ಯಕ್ಷ ಶಿವರಾಜ್ ಕಮಲಾಪೂರೆ, ಹಿರಿಯ ಉಪಾಧ್ಯಕ್ಷ ಗೌತಮ್ ಚಿಂತಲಗೇರಾ, ಮಹ್ಮದ್ ಅಬ್ದುಲ್ ಸುತ್ತಾರ್ ಮತ್ತು ಜಿಲ್ಲೆಯ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಎಲ್ಲಾ ತಾಲ್ಲೂಕಾ ಅಧ್ಯಕ್ಷರು ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸರ್ಕಾರಿ ನೌಕರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X