ಬೀದರ್ | ಆಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಶತಮನೋತ್ಸವ ಪ್ರಯುಕ್ತ ಒಂದು ತಿಂಗಳು ವಿವಿಧ ಕಾರ್ಯಕ್ರಮಗಳ ಆಯೋಜನೆ

ಬೀದರ್ : ಆಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಶತಮನೋತ್ಸವದ ಪ್ರಯುಕ್ತ ಜಿಲ್ಲೆಯಲ್ಲಿ ಫೆ.14 ರಿಂದ ಮಾ.15 ರವರೆ ಒಂದು ತಿಂಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ ಎಂದು ಬಿಜೆಪಿಯ ಜಿಲ್ಲಾಧ್ಯಕ್ಷ ಸೋಮನಾಥ್ ಪಾಟೀಲ್ ಅವರು ತಿಳಿಸಿದರು.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಟಲ್ ಬಿಹಾರಿ ವಾಜಪೇಯಿ ಅವರು ಈ ದೇಶಕಂಡ ಅಪ್ರತಿಮ ನಾಯಕರಾಗಿದ್ದರು. ಹಲವು ಮಹಾತ್ವಾಕಾಂಕ್ಷೆಗಳನ್ನು ಇಟ್ಟುಕೊಂಡು ದೇಶ ಮುನ್ನಡೆಸಿದ ಧೀಮಂತ ನಾಯಕರಾಗಿದ್ದರು. ಅವರೊಬ್ಬ ವ್ಯಕ್ತಿಯಲ್ಲ ಶಕ್ತಿಯಾಗಿದ್ದರು ಎಂದು ವಾಜಪೇಯಿ ಅವರ ಗುಣಗಾನ ಮಾಡಿದರು.
1924 ರ ಡಿ. 25 ರಂದು ಗ್ವಾಲಿಯರ್‌ನಲ್ಲಿ ಜನ್ಮತಾಳಿದ್ದ ವಾಜಪೇಯಿ ಅವರ ಜನ್ಮ ದಿನಕ್ಕೆ 2024ರ ಡಿ.25 ರಂದು ನೂರು ವರ್ಷ ಕಳೆದಿರುವ ಪ್ರಯುಕ್ತ ಅವರ ಜನ್ಮ ಶತಮಾನೋತ್ಸವ ಪ್ರಯುಕ್ತ ಫೆ.14 ರಿಂದ ಮಾ. 14 ರವರೆಗೆ ಹಲವು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷ ಶಶಿ ಹೊಸಳ್ಳಿ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೀರಪ್ಪ ಔರಾದೆ, ಗುರುನಾಥ ಜ್ಯಾಂತಿಕರ್, ಸಾಮಾಜಿಕ ಜಾಲತಾಣದ ಮುಖ್ಯಸ್ಥ ವೀರೂ ದಿಗ್ವಾಲ್, ಮಾಧ್ಯಮ ಪ್ರತಿನಿಧಿ ಶ್ರೀನಿವಾಸ್ ಚೌಧರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.