ಹೆಚ್ಚು ತೆರಿಗೆ ಪಾವತಿಸುವ ಕರ್ನಾಟಕ ರಾಜ್ಯಕ್ಕೆ ಬಜೆಟ್ನಲ್ಲಿ ವಂಚನೆ : ಸಂಸದ ಸಾಗರ್ ಖಂಡ್ರೆ

ಸಾಗರ್ ಖಂಡ್ರೆ
ಬೀದರ್ : ದೇಶದ ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ಒಂದಾದ ಕರ್ನಾಟಕ ತನ್ನ ಹಕ್ಕಿನ ಅನುದಾನದಿಂದ ಈ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ವಂಚಿಸಲಾಗಿದೆ ಎಂದು ಸಂಸದ ಸಾಗರ್ ಖಂಡ್ರೆ ಪ್ರತಿಕ್ರಿಯೆ ನೀಡಿದ್ದಾರೆ.
ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ನಲ್ಲಿ ಬರಪೀಡಿತ ರೈತರಿಗೆ ಯಾವುದೇ ಪರಿಹಾರವಿಲ್ಲ. ಯುವಕರಿಗೆ ಉದ್ಯೋಗ ಸೃಷ್ಟಿಸಲು ಸ್ಪಷ್ಟ ಯೋಜನೆಗಳಿಲ್ಲ. ಹಾಗೆಯೇ ಕಲ್ಯಾಣ ಕರ್ನಾಟಕ ಸೇರಿದಂತೆ ಇತರ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಲಾಗಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ರೈಲು, ನೀರಾವರಿ ಮತ್ತು ಮೂಲಸೌಕರ್ಯ ಯೋಜನೆಗಳು ಮತ್ತೊಮ್ಮೆ ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಕರ್ನಾಟಕದ ಅವಶ್ಯಕತೆಗಳನ್ನು ಕಡೆಗಣಿಸಿ, ಚುನಾವಣೆ ಪ್ರಮುಖ ರಾಜ್ಯಗಳಿಗೆ ಆದ್ಯತೆ ನೀಡಲಾಗಿದೆ. ಆದರೆ, 12 ಲಕ್ಷ ರೂ. ವರೆಗೆ ಆದಾಯ ತೆರಿಗೆ ವಿನಾಯಿತಿಯನ್ನು ಹೆಚ್ಚಿಸಿದಕ್ಕಾಗಿ ಮಧ್ಯಮವರ್ಗಕ್ಕೆ ಸಮಾಧಾನ ತಂದಿದ್ದು ಸ್ವಾಗತಾರ್ಹವಾಗಿದೆ ಎಂದಿದ್ದಾರೆ.
Next Story