ಖಾಜಿ ಅರ್ಷದ್ ಅಲಿ ನಿಧನಕ್ಕೆ ಸಚಿವ ರಹೀಮ್ ಖಾನ್ ಸಂತಾಪ

ರಹೀಮ್ ಖಾನ್
ಬೀದರ್ : ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಹಿರಿಯ ಪತ್ರಕರ್ತರಾದ ಖಾಜಿ ಅರ್ಷದ್ ಅಲಿ ಅವರ ನಿಧನಕ್ಕೆ ಪೌರಾಡಳಿತ ಹಾಗೂ ಹಜ್ ಸಚಿವ ರಹೀಮ್ ಖಾನ್ ಅವರು ಸಂತಾಪ ಸೂಚಿಸಿದ್ದಾರೆ.
ಬೀದರ್ ನ ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮತ್ತು ಮಾಜಿ ವಿಧಾನ ಪರಿಷತ್ ಸದಸ್ಯ ಜನಾಬ್ ಖಾಜಿ ಅರ್ಷದ್ ಅಲಿ ಅವರ ನಿಧನದ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ಅವರು ದೀರ್ಘಕಾಲ ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದರು ಮತ್ತು ಸಾರ್ವಜನಿಕ ಸೇವೆಗಾಗಿ ಯಾವಾಗಲೂ ಶ್ರಮಿಸಿದರು ಎಂದು ಹೇಳಿದ್ದಾರೆ.
ಖಾಜಿ ಅರ್ಷದ್ ಅಲಿ ಅವರ ಅಗಲಿಕೆ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಆ ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
Next Story