ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ: ಆರೋಪಿ ತಂದೆಯ ಸೆರೆ
ಬೀದರ್, ಜು.31: ಅಪ್ರಾಪ್ತ ವಯಸ್ಸಿನ ಪುತ್ರಿಯ ಮೇಲೆ ನಿರಂತರ ಅತ್ಯಾಚಾರ ಎಸಗುತ್ತಿದ್ದ ಆರೋಪಿ ತಂದೆಯನ್ನು ಬಸವಕಲ್ಯಾಣ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಕೋವಿಡ್ ಲಾಕ್ ಡೌನ್ ಸಂದರ್ಭ ಶಾಲೆಗೆ ರಜೆ ಘೋಷಿಸಿದ್ದ ಅವಧಿಯಲ್ಲಿ ಆರೋಪಿ ಈ ಕೃತ್ಯ ಎಸಗಲಾರಂಭಿಸಿದ್ದಾನೆ ಎಂದು ತಿಳಿದುಬಂದಿದೆ. ಮನೆಯಲ್ಲಿ ಯಾರೂ ಇಲ್ಲದಾಗ ಬಲವಂತವಾಗಿ ಅತ್ಯಾಚಾರ ಎಸಗುತ್ತಿದ್ದ ಆರೋಪಿ ಯಾರಿಗೂ ವಿಷಯ ತಿಳಿಸಿದಂತೆ ಬಾಲಕಿಗೆ ಬೆದರಿಕೆಯೊಡ್ಡುತ್ತಿದ್ದ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಇತ್ತೀಚೆಗೆ ಪ್ರಕರಣ ಬೆಳಕಿಗೆ ಬಂದಿದ್ದು, ದೂರಿನ ಮೇರೆಗೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Next Story