ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣ: ಗಾಂಧಿಗಂಜ್ನ ಪೊಲೀಸ್ ಠಾಣೆಯ ಇಬ್ಬರು ಹೆಡ್ ಕಾನ್ಸ್ಟೇಬಲ್ಗಳು ಅಮಾನತು
ಸಚಿನ್ ಪಾಂಚಾಳ
ಬೀದರ್: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಗಾಂಧಿಗಂಜ್ನ ಇಬ್ಬರು ಪೊಲೀಸ್ ಹೆಡ್ ಕಾನ್ಸ್ಟೇಬಲ್ಗಳನ್ನು ಜಿಲ್ಲಾ ಪೊಲೀಸ್ ವರಿಸ್ಠಾಧಿಕಾರಿ ಪ್ರದೀಪ್ ಗುಂಟಿ ಅಮಾನತು ಮಾಡಿದ್ದಾರೆ.
ರಾಜೇಶ್ ಹಾಗೂ ಶಾಮಲಾ ಎಂಬ ಇಬ್ಬರು ಅಮಾನತುಗೊಂಡ ಪೊಲೀಸ್ ಹೆಡ್ ಕಾನ್ಸ್ಟೇಬಲಗಳು.
ಮೃತ ಗುತ್ತಿಗೆದಾರ ಸಚಿನ್ ಪಾಂಚಾಳ ಗುರುವಾರ ಡೆತ್ನೋಟ್ ಬರೆದು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಡೆತ್ನೋಟ್ ನೋಡಿ ಗಾಬರಿಗೊಂಡು ಮೃತನ ಕುಟುಂಬಸ್ಥರು ನಗರದ ಗಾಂಧಿಗಂಜ್ ಪೊಲೀಸ್ ಠಾಣೆಗೆ ಧಾವಿಸಿದ್ದರು. ತನ್ನ ತಮ್ಮನನ್ನು ಹುಡಿಕಿ ಕೊಡಿ ಎಂದು ಮೃತ ಗುತ್ತಿಗೆದಾರ ಸಚಿನ್ ಅವರ ಸಹೋದರಿ ದೂರು ನೀಡಲು ಬಂದಿದ್ದರು ಕೂಡ ಗಾಂಧಿಗಂಜ್ ಪೊಲೀಸರು ದೂರನ್ನು ಸ್ವೀಕರಿಸದೇ ಸರಿಯಾಗಿ ಸ್ಪಂದಿಸಿರಲಿಲ್ಲ. ಪೊಲೀಸರು ಎಫ್ಐಆರ್ ದಾಖಲಿಸಿಕೊಳ್ಳದೇ ನಿರ್ಲಕ್ಷ್ಯಿಸಿದ್ದಕ್ಕೆ ನಮ್ಮಣ್ಣ ಸಾವನ್ನಪ್ಪಿದ್ದಾನೆ ಎಂದು ಮೃತ ಗುತ್ತಿಗೆದಾರನ ಸಹೋದರಿ ಪೊಲೀಸ್ ವರಿಸ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದರು.
ಇದರಿಂದಾಗಿ ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಇಬ್ಬರು ಪೊಲೀಸ್ ಹೆಡ್ ಕಾನ್ಸ್ಟೇಬಲ್ ಗಳನ್ನು ಅಮಾನತುಗೊಳಿಸಿದ್ದರ ಬಗ್ಗೆ ಜಿಲ್ಲಾ ಪೊಲೀಸ್ ವರಿಸ್ಠಾಧಿಕಾರಿ ಪ್ರದೀಪ್ ಗುಂಟಿ ಮಾಹಿತಿ ನೀಡಿದ್ದಾರೆ.