ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಲು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಆಗ್ರಹ
ಬೀದರ್ : ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿ ಗ್ರಾಮದ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು ಎಂದು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಆಗ್ರಹಿಸಿದೆ.
ಘಟನೆಯನ್ನು ಖಂಡಿಸಿ ಟೋಕ್ರಿ ಕೋಲಿ ಸಮಾಜ ಮತ್ತು ಇತರರ ನೇತೃತ್ವದಲ್ಲಿ ಕೋಟೆಯಿಂದ ವಾಲ್ಮೀಕಿ ಚೌಕ್ ಬಸವಕಲ್ಯಾಣದವರೆಗೆ ಪ್ರತಿಭಟನೆ ಮತ್ತು ರ್ಯಾಲಿಯನ್ನು ಆಯೋಜಿಸಲಾಗಿತ್ತು. ತಪ್ಪಿತಸ್ಥರನ್ನು ಗಲ್ಲಿಗೇರಿಸಬೇಕೆಂದು ಆಗ್ರಹಿಸಲಾಯಿತು. ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಅತ್ಯಾಚಾರ ಪ್ರಕರಣಗಳನ್ನು ಮಟ್ಟಹಾಕಲು ಕರ್ನಾಟಕ ಸರ್ಕಾರವು ಬಲವಾದ ಕಾನೂನುಗಳನ್ನು ತರಬೇಕೆಂದು ಪಕ್ಷವು ಆಗ್ರಹಿಸಿದೆ. ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕರ್ನಾಟಕ ಘಟಕದ ರಾಜ್ಯ ಉಪಾಧ್ಯಕ್ಷ ಮುಜಾಹಿದ್ ಪಾಷಾ ಖುರೇಶಿ, ಸದಸ್ಯರಾದ ಜಗನ್ನಾಥ ಜಮಾದಾರ, ಈಶ್ವರಬೊಕ್ಕೆ ಗೋವಿಂದ ಚಾಮಲ್ಲೆ ಆಕಾಶ ಖಂಡಾಲೆ, ಶಂಕರ ರಾವ್ ಜಮಾದಾರ ಸೇರಿದಂತೆ ಹಲವರು ಪ್ರತಿಬಟನೆಯಲ್ಲಿ ಪಾಲ್ಗೊಂಡು ಕೃತ್ಯವನ್ನು ಖಂಡಿಸಿದರು.
ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿ ಗ್ರಾಮದ ಬಾಲಕಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಭೀಕರವಾಗಿ ಕೊಲೆ ಮಾಡಿ ಗುಣತೀರ್ಥವಾಡಿ ಗ್ರಾಮದ ಸರ್ಕಾರಿ ಶಾಲೆಯ ಪಕ್ಕದಲ್ಲಿರುವ ಮುಳ್ಳು ಕಂಟಿಯಲ್ಲಿ ಎಸೆದು ಹೋಗಿದ್ದು, ಯುವತಿಯ ಶವ ಬಹುತೇಕ ವಿವಸ್ತ್ರವಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.