ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕಾರ
ಉಪ ಮುಖ್ಯಮಂತ್ರಿಗಳಾಗಿ ಏಕನಾಥ್ ಶಿಂದೆ, ಅಜಿತ್ ಪವಾರ್ ಪ್ರಮಾಣ
Photo : TOI
ಮುಂಬೈ : ಮಹಾರಾಷ್ಟ್ರದಲ್ಲಿ ನೂತನ ಮಹಾಯುತಿ ಸರಕಾರ ಗುರುವಾರ ಅಧಿಕಾರಕ್ಕೇರಿದ್ದು, ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅವರು ಪ್ರಮಾಣವಚನ ಸ್ವೀಕರಿಸಿದರು. ಮುಂಬೈಯ ಆಝಾದ್ ಮೈದಾನದಲ್ಲಿ ನಡೆದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರು ಫಡ್ನವೀಸ್ ಅವರಿಗೆ ಅಧಿಕಾರ, ಗೌಪ್ಯತೆಯ ಪ್ರತಿಜ್ಞಾವಿಧಿ ನೆರವೇರಿಸಿದರು.
ನಿರ್ಗಮನ ಮುಖ್ಯಮಂತ್ರಿ ಏಕನಾಥ ಶಿಂದೆ ಹಾಗೂ ಎನ್ಸಿಪಿ ನಾಯಕ ಅಜಿತ್ ಪವಾರ್ ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ಶಾ, ವಿವಿಧ ರಾಜ್ಯಗಳ ಬಿಜೆಪಿ ಮುಖ್ಯಮಂತ್ರಿಗಳು, ಬಿಜೆಪಿ, ಶಿವಸೇನಾ ಹಾಗಾಊ ಎನ್ಸಿಪಿ ಸೇರಿದಂತೆ ಮುಹಾಯುತಿ ಮೈತ್ರಿಕೂಟದ ನಾಯಕರು ಸಮಾರಂಭದಲ್ಲಿ ಭಾಗವಹಿಸಿದ್ದರು. ಬಾಲಿವುಡ್ ತಾರೆಯರಾದ ಶಾರೂಕ್ ಖಾನ್, ಸಲ್ಮಾನ್ ಖಾನ್, ರಣಬೀರ್ ಕಪೂರ್ ಹಾಗೂ ರಣವೀರ್ ಸಿಂಗ್, ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ಉದ್ಯಮಿಗಳಾದ ಮುಕೇಶ್ ಅಂಬಾನಿ ಹಾಗೂ ಗೌತಮ್ ಆದಾನಿ ಮತ್ತಿತರ ಗಣ್ಯರು ಕೂಡಾ ಉಪಸ್ಥಿತರಿದ್ದರು.
ನೂತನ ಸಂಪುಟದ ಇತರ ಸದಸ್ಯರು ಚಳಿಗಾಲದ ಅಧಿವೇಶನಕ್ಕೆ ಮುನ್ನ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆಯೆಂದು ಮಹಾರಾಷ್ಟ್ರ ಬಿಜೆಪಿ ನಾಯಕ ಸುಧೀರ್ ಮುಂಗಂತಿವಾರ್ ತಿಳಿಸಿದ್ದಾರೆ.
►ಮೂರನೇ ಬಾರಿ ಸಿಎಂ ಆಗಿ ಪದಗ್ರಹಣ
ಫಡ್ನವೀಸ್ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡಿರುವುದು ಇದು ಮೂರನೆ ಸಲವಾಗಿದೆ. ಪ್ರಥಮ ಬಾರಿಗೆ ಮುಖ್ಯಮಂತ್ರಿಯಾಗಿ ಅವರು 2014ರ ಆಕ್ಟೋಬರ್ನಿಂದ 2019ರ ನವೆಂಬರ್ವರೆಗೆ ಕಾರ್ಯನಿರ್ವಹಿಸಿದ್ದರು.44ನೇ ವಯಸ್ಸಿನಲ್ಲಿ ಈ ಹುದ್ದೆಯನ್ನು ಆಲಂಕರಿಸುವ ಮೂಲಕ ಮಹಾರಾಷ್ಟ್ರದ ಅತ್ಯಂತ ಕಿರಿಯ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
ಆದರೆ ಎರಡನೆ ಅವಧಿಗೆ ಮುಖ್ಯಮಂತ್ರಿಯಾಗಿ ಅವರು ಕೇವಲ ಐದು ದಿನಗಳ ಕಾಲ ಅಧಿಕಾರದಲ್ಲಿದ್ದರು.2019ರ ಅಕ್ಟೋಬರ್ನಲ್ಲಿ ನಡೆದ ವಿಧಾನಸಭಾ ಚುನಾವಣೆಯ ಬಳಿಕ ಸಿಎಂ ಹುದ್ದೆಗೆ ಸಂಬಂಧಿಸಿ ಬಿಕ್ಕಟ್ಟು ತಲೆದೋರಿದ್ದರಿಂದ ಉದ್ಧವ್ ಠಾಕ್ರೆ ನೇತೃತ್ವದ ಅವಿಭಜಿತ ಶಿವಸೇನಾ ಪಕ್ಷವು ಬಿಜೆಪಿ ಜೊತೆ ಮೈತ್ರಿಕಡಿದುಕೊಂಡಿತ್ತು. ಆನಂತರ ದೇವೇಂದ್ರ ಫಡ್ನವೀಸ್ ಅವರು ಎರಡನೆ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. 2019ರ ನವೆಂಬರ್ 23ರಿಂದ 28ರವರೆಗೆ ಕಾರ್ಯನಿರ್ವಹಿಸಿದ್ದರು. ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವ ಮುನ್ನವೇ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರು.
ನವೆಂಬರ್ 20ರಂದು ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು ಪ್ರಚಂಡ ಜಯಭೇರಿ ಬಾರಿಸಿತ್ತು. 288 ವಿಧಾನಸಭಾ ಕ್ಷೇತ್ರಗಳ ಪೈಕಿ132 ಸ್ಥಾನಗಳ್ನು ಬಿಜೆಪಿ ಗ್ದೆುಕೊಂಡಿದ್ದು, ಇದು ರಾಜ್ಯದಲ್ಲಿ ಆಪಕ್ಷದ ಇದುವರೆಗಿನ ಅತ್ಯುತ್ತಮ ಸಾಧನೆಯಾಗಿದೆ.
ಏಕನಾಥ ಶಿಂದೆ ನೇತೃತ್ವದ ಶಿವಸೇನಾ, ಅಜಿತ್ ಪವಾರ್ ಅವರ ಎನ್ಸಿಪಿ ಹಾಗೂ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು ಒಟ್ಟು 230 ಸ್ಥಾನಗಳಲ್ಲಿ ಜಯಗಳಿಸಿತ್ತು.
►ಸ್ಥಿರ ಸರಕಾರ ನೀಡುವೆವು: ಫಡ್ನವೀಸ್
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ದೇವೇಂದ್ರ ಫಡ್ನವೀಸ್ ಅವರು . ಮುಂದಿನ ಐದು ವರ್ಷಗಳ ಕಾಲ ರಾಜ್ಯದಲ್ಲಿ ಸ್ಥಿರ ಸರಕಾರವಿರುವುದಾಗಿ ಭರವಸೆ ನೀಡಿದರು.
ಜನರು ಸ್ಥಿರ ಸರಕಾರವನ್ನು ಬಯಸುತ್ತಿದ್ದು, ಅದಕ್ಕಾಗಿ ಅವರು ನಮ್ಮನ್ನು ಆಯ್ಕೆ ಮಾಡಿದ್ದಾರೆ. ಅವರು ಏಕನಾಥ ಶಿಂದೆ ಹಾಗೂ ಅಜಿತ್ ಪವಾರ್ ನನ್ನ ಜೊತೆಗಿದ್ದಾರೆ ನಾವು ಜೊತೆಗೂಡಿ ಕೆಲಸ ಮಾಡಲಿದ್ದೇವೆ ಎಂದವರು ಭರವಸೆ ನೀಡಿದರು.ಜನಪ್ರಿಯ ‘ಮಾಝಿ ಲಡ್ಕಿ ಬಹಿನ್ ಯೋಜನೆ’ಯನ್ನು ಮುಂದುವರಿಸಲಾಗುವುದೆಂದು ಅವರು ತಿಳಿಸಿದರು.
ಉಪಮುಖ್ಯಮಂತ್ರಿಗಳಾದ ಏಕನಾಥ ಶಿಂದೆ ಹಾಗೂ ಅಜಿತ್ ಪವಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.