ಜು.7ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್
ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್
ಮಂಗಳೂರು, ಜು.6: ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.7ರಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.
*ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಕಂಟ್ರೋಲ್ ರೂಂ 1077 ಹಾಗೂ ದೂ.ಸಂ: 0824-2442590 ಸಂಪರ್ಕಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story