ಹಿಮಾಚಲ ಪ್ರದೇಶ | ಕುಲ್ಲುವಿನಲ್ಲಿ ಭೂಕುಸಿತ ; ಆರು ಜನರು ಮೃತ್ಯು

Photo: x/@dhir022
ಶಿಮ್ಲಾ: ಹಿಮಾಚಲ ಪ್ರದೇಶದ ಕುಲ್ಲುವಿನಲ್ಲಿ ಭೂಕುಸಿತ ಸಂಭವಿಸಿದ್ದು, ಮಣಿಕರಣ್ ಗುರುದ್ವಾರ ಪಾರ್ಕಿಂಗ್ ಬಳಿ ರವಿವಾರ ಮರಗಳು ಉರುಳಿ ಬಿದ್ದ ಪರಿಣಾಮ ಆರು ಜನರು ಮೃತಪಟ್ಟು ಐವರು ಗಾಯಗೊಂಡಿದ್ದಾರೆ ಎಂದು ANI ವರದಿ ಮಾಡಿದೆ.
ಪೊಲೀಸರು ಮತ್ತು ರಕ್ಷಣಾ ತಂಡಗಳು ಐದು ಮಂದಿ ಗಾಯಾಳುಗಳನ್ನು ಸ್ಥಳೀಯ ಸಮುದಾಯ ಆಸ್ಪತ್ರೆಗೆ ಸ್ಥಳಾಂತರಿಸಿವೆ ಎಂದು ಕುಲ್ಲುವಿನ ಹೆಚ್ಚುವರಿ ಜಿಲ್ಲಾಧಿಕಾರಿ ಅಶ್ವನಿ ಕುಮಾರ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
Next Story