Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬ್ಲೂ ಫ್ಲ್ಯಾಗ್ ಮೂಲಕ ಬೀಚ್ ಅಭಿವೃದ್ಧಿ:...

ಬ್ಲೂ ಫ್ಲ್ಯಾಗ್ ಮೂಲಕ ಬೀಚ್ ಅಭಿವೃದ್ಧಿ: ಪಡುಬಿದ್ರಿ ಸರ್ವೇಗೆ ಸ್ಥಳೀಯರ ವಿರೋಧ

ವಾರ್ತಾಭಾರತಿವಾರ್ತಾಭಾರತಿ12 July 2018 6:01 PM IST
share
ಬ್ಲೂ ಫ್ಲ್ಯಾಗ್ ಮೂಲಕ ಬೀಚ್ ಅಭಿವೃದ್ಧಿ: ಪಡುಬಿದ್ರಿ ಸರ್ವೇಗೆ ಸ್ಥಳೀಯರ ವಿರೋಧ

ಪಡುಬಿದ್ರಿ,ಜು.12: ಪಡುಬಿದ್ರಿ ಬೀಚ್‍ಗೆ ನೀಲ ಪತಾಕೆ (ಬ್ಲೂ ಫ್ಲ್ಯಾಗ್) ಅಂತರಾಷ್ಟ್ರೀಯ ಮಾನ್ಯತೆ ಪಡೆಯಲಿದ್ದು, ಈ ನಿಟ್ಟಿನಲ್ಲಿ ಬೀಚ್‍ನ ಸಮಗ್ರ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಬುಧವಾರ ಸರ್ವೇ ನಡೆಸುತ್ತಿರುವುದನ್ನು ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ.

ಅಂತಾರಾಷ್ಟ್ರೀಯ ಮಾನ್ಯತೆ ಪಡೆದ ಬ್ಲೂ ಫ್ಲ್ಯಾಗ್ ಯೋಜನೆಗೆ ಭಾರತದಲ್ಲಿ 13 ಬೀಚ್‍ಗಳು ಆಯ್ಕೆಗೊಂಡಿಂದ್ದು, ರಾಜ್ಯದಲ್ಲಿ ಪಡುಬಿದ್ರಿ ಬೀಚ್‍ನ್ನು ಆಯ್ಕೆಗೊಳಿಸಿಲಾಗಿದೆ. ಬೀಚ್‍ನ್ನು ಸಮಗ್ರ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಪಂಚಾಯತ್ ಗ್ರಾಮಲೆಕ್ಕಿಗರೊಂದಿಗೆ ಪಡುಬಿದ್ರಿ ಬೀಚ್‍ನ ನಡಿಪಟ್ಣ ಮತ್ತು ಕಾಡಿಪಟ್ಣ ಪರಿಸರದಲ್ಲಿ ಜಾಗದ ಸರ್ವೇ ನಡೆಸಲು ಮುಂದಾಗಿದ್ದರು. ಆತಂಕಿತರಾದ ಸ್ಥಳೀಯರು ಸರ್ವೇ ನಡೆಸಲು ಬಂದವರನ್ನು ತಡೆದು ವಾಪಾಸು ಕಳುಹಿಸಿದ್ದಾರೆ.

ಬ್ಲೂ ಫ್ಲ್ಯಾಗ್ ಯೋಜನೆ ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಅಭಿವೃದ್ಧಿಯ ಅಂಗವಾಗಿದ್ದು, ಇದರಿಂದ ಸ್ಥಳೀಯ ನಿವಾಸಿಗಳಿಗೆ ಯಾವುದೇ ರೀತಿಯ ತೊಡಕು ಉಂಟಾಗುವುದಿಲ್ಲ. ಈ ಪ್ರದೇಶದ ಮೀನುಗಾರಿಕಾ ರಸ್ತೆಯ ವಿಸ್ತರಣೆಗಾಗಿ ಸರ್ವೇ ನಡೆಸುತ್ತಿದ್ದರು. ಬ್ಲೂ ಫ್ಲ್ಯಾಗ್ ಯೋಜನೆಗೆ ಸಂಬಂಧಪಟ್ಟ ಅಭಿವೃದ್ಧಿ ಕಾರ್ಯಗಳು ಪಡುಬಿದ್ರಿಯ ಮುಖ್ಯ ಬೀಚ್ ಪರಿಸರದಲ್ಲಿ ನಡೆಸಲಾಗುತ್ತಿಲ್ಲ. ಮುಟ್ಟವಳಿವೆ ಸಮೀಪವಿರುವ ಸುಮಾರು 1 ಎಕರೆಯ ಸರ್ಕಾರಿ ಜಮೀನಿನಲ್ಲಿ ಅಭಿವೃದ್ಧಿ ಕಾರ್ಯ ನಡೆಯಲಿದೆ. ಮೀನುಗಾರಿಕೆಗೆ ಆತಂಕ ಬೇಡ. ರಸ್ತೆ ಅಗಲೀಕರಣಕ್ಕಾಗಿ ಕುಮ್ಕಿ ಜಾಗಗಳು ಮಾತ್ರ ಸರ್ವೇಗೆ ಒಳಗಾಗುತ್ತಿದೆ. ಉಳಿದಂತೆ ಮೀನುಗಾರರ ಒಂದಿಂಚು ಜಾಗವನ್ನೂ ಮುಟ್ಟಲಾಗುವುದಿಲ್ಲ. ಈ ಯೋಜನೆಯಿಂದ ಸ್ಥಳೀಯ ನಿವಾಸಿಗಳಿಗೆ ಬಹಳಷ್ಟು ಲಾಭವಾಗಲಿದೆ ಎಂದು ಉಡುಪಿ ಜಿಲ್ಲಾ ಬೀಚ್ ಪ್ರವಾಸೋಧ್ಯಮ ಅಭಿವೃದ್ಧಿ ಸಮಿತಿಯ ಮನೋಹರ್ ಶೆಟ್ಟಿ ತಿಳಿಸಿದ್ದಾರೆ.

ಬ್ಲೂ ಫ್ಲ್ಯಾಗ್ ಯೋಜನೆಯ ಮೂಲಕ ಕೇಂದ್ರ ಸರ್ಕಾರದ ಪರಿಸರ ಇಲಾಖೆಯ ಮೂಲಕ ಸಮಗ್ರ ಅಭಿವೃದ್ಧಿ ಪಡಿಸಲಾಗುವುದು. ಪರಿಸರ ಸ್ನೇಹಿಯಾಗಿ ಈ ಯೋಜನೆ ನಿರ್ಮಾಣಗೊಳ್ಳಲಿದೆ. ಇದು ಕೇಂದ್ರದ ಪರಿಸರದ ಇಲಾಖೆಯ ಯೋಜನೆಯಾಗಿದೆ.  500 ಮೀಟರ್ ವ್ಯಾಪ್ತಿಯೊಳಗಡೆ ಅಭಿವೃದ್ಧಿ ಪಡಿಸಲಾಗುವುದು. ಸರ್ಕಾರ ಜಮೀನಿನಲ್ಲೇ ಯೋಜನೆ ರೂಪಿಸಿಕೊಳ್ಳಲು ಸರ್ವೇ ನಡೆಸಲಾಗಿದೆ. ಯಾವುದೇ ಖಾಸಗಿ ಜಾಗವನ್ನು, ಮರ, ಗಿಡಗಳು ಹಾಗೂ ಯಾವುದೇ ಮನೆಗಳನ್ನು ತೆರವುಗೊಳಿಸುವುದಿಲ್ಲ. ಯೋಜನೆ ಬಗ್ಗೆ ಸಂದೇಹವಿದ್ದಲ್ಲಿ ಶುಕ್ರವಾರ ಸಭೆಯಲ್ಲಿ ಬಂದು ಮಾಹಿತಿ ಪಡೆದುಕೊಳ್ಳಬಹುದು ಎಂದು ಪ್ರವಾಸೋಧ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಅನಿತಾ ಭಾಸ್ಕರ್ ಪತ್ರಿಕೆಗೆ ತಿಳಿಸಿದ್ದಾರೆ.

ರಸ್ತೆ ಅಗಲೀಕರಣ, ಸರ್ವೇ ಕಾರ್ಯ ಮತ್ತು ಬ್ಲೂ ಫ್ಲ್ಯಾಗ್ ಯೋಜನೆಯ ಬಗ್ಗೆ ಸ್ಥಳೀಯರೊಂದಿಗೆ ಚರ್ಚಿಸುವ ಸಲುವಾಗಿ ಜಿಲ್ಲಾಡಳಿತವು ಶುಕ್ರವಾರ ಸಂಜೆ ಸಾಗರ ವಿದ್ಯಾ ಮಂದಿರ ಶಾಲೆಯಲ್ಲಿ ಸಭೆ ಕರೆದಿದ್ದು ಕಾಡಿಪಟ್ಟಣ ಮತ್ತು ನಡಿಪಟ್ಣ ಊರುಗಳು ಮೊಗವೀರ ಮುಖಂಡರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X