ಚಾಮರಾಜನಗರ | ರಸ್ತೆಯಲ್ಲೇ ಹೊತ್ತಿ ಉರಿದ ಪಿಕಪ್ ವಾಹನ

ಚಾಮರಾಜನಗರ : ಚಲಿಸುತ್ತಿದ್ದ ಪಿಕಪ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಜಿಲ್ಲೆಯ ಬಂಡೀಪುರ ರಾಷ್ಟ್ರಿಯ ಉದ್ಯಾನವನ ವ್ಯಾಪ್ತಿಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಕೇರಳದಿಂದ ಕರ್ನಾಟಕಕ್ಕೆ ದ್ರಾಕ್ಷಿ ಹಣ್ಣು ತುಂಬಿಕೊಂಡು ಬರುತ್ತಿದ್ದ ಪಿಕಪ್ ವಾಹನಕ್ಕೆ ಬೆಂಕಿ ಕಾಣಿಸಿಕೊಂಡಿದ್ದರಿಂದ ಚಾಲಕ ವಾಹನವನ್ನು ರಸ್ತೆಯ ಬದಿ ನಿಲ್ಲಿಸಿದ್ದು, ಕ್ಷಣಾರ್ಧದಲ್ಲಿ ಬೆಂಕಿ ಜ್ವಾಲೆ ಹೆಚ್ಚಾಗಿ ವಾಹನ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಅದೃಷ್ಟವಷಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಬಳಿಯಲ್ಲೇ ಇದ್ದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಗುಂಡ್ಲುಪೇಟೆಯಲ್ಲಿರುವ ಅಗ್ನಿ ಶಾಮಕದಳದವರಿಗೆ ಮಾಹಿತಿ ನೀಡಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದರು.
Next Story