ಹನೂರು : ರಸ್ತೆ ಬದಿಯಲ್ಲಿ ಬಿಹಾರ ಮೂಲದ ವ್ಯಕ್ತಿಯ ಮೃತದೇಹ ಪತ್ತೆ
ಚಾಮರಾಜನಗರ : ಹನೂರು ತಾಲ್ಲೂಕಿನ ಹುತ್ತೂರು ಪಂಚಾಯತಿಯ ಒಡೆಯರಪಾಳ್ಯ ಟಿಬೆಟಿಯನ್ ಸೆಟಲ್ಮೆಂಟ್ ರಸ್ತೆ ಬದಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ಬಿಹಾರ ಮೂಲದ ಸೋನಮ್ ಎಂದು ಗುರುತಿಸಲಾಗಿದೆ. ಈತ ಕಳೆದ ಹತ್ತು ವರ್ಷಗಳಿಂದ ಟಿಬೆಟ್ ಕ್ಯಾಂಪ್ ನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ.
ಘಟನೆ ಬೆನ್ನಲ್ಲೆ ಚಾಮರಾಜನಗರ ಜಿಲ್ಲೆಯ ಹನೂರು ಪೋಲಿಸರು ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Next Story