ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್.ಜಯಣ್ಣ ನಿಧನ
ಚಾಮರಾಜನಗರ: ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್.ಜಯಣ್ಣ ಮಂಗಳವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ.
ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಅವರನ್ನು ಸಮೀಪದ ಜನನಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತಾದರೂ ದಾರಿಮಧ್ಯೆ ಅವರು ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ.
ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದ್ದ ಜಯಣ್ಣ ಮುಖ್ಯಮಂತ್ರಿ ಸಿದ್ದರಾಮಯ್ಯರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು.
ಮೃತರ ಅಂತ್ಯಕ್ರಿಯೆ ಬುಧವಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Next Story