ಹನೂರು | ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ
ಹನೂರು : ತನ್ನ ಇಬ್ಬರು ಮಕ್ಕಳೊಂದಿಗೆ ಮಹಿಳೆಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಕಾಡು ಹೊಲ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಡುಗೋಲ ಗ್ರಾಮದ ಸುಶೀಲ (30) ಮಕ್ಕಳಾದ ಚಂದ್ರು (8) ದಿವ್ಯಾ (11) ಎಂಬವರು ಮೃತಪಟ್ಟವರೆಂದು ತಿಳಿದು ಬಂದಿದೆ.
ಕೌಟುಂಬಿಕ ಕಲಹವೇ ಈ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಮಲೆಮಾದೇಶ್ವರ ಬೆಟ್ಟ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Next Story